- Advertisement -
ಮೂಡಲಗಿ: ಕರ್ನಾಟಕದ ಹೆಮ್ಮೆಯ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟೀಷರ ವಿರುದ್ಧ ನಡೆಸಿದ 1824ರ ಸ್ವಾತಂತ್ರ್ಯ ಸಂಗ್ರಾಮದ 200 ನೇ ವರ್ಷದ ವಿಜಯೋತ್ಸವದ ಅಂಗವಾಗಿ ದೆಹಲಿಯ ಸಂಸತ್ ಭವನದ ಆವರಣದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ರಾಣಿ ಚೆನ್ನಮ್ಮನ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕಸಭೆಯ ಸಭಾಪತಿಗಳಾದ ಓಂ ಬಿರ್ಲಾ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ, ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ , ಅರವಿಂದ ಬೆಲ್ಲದ ಸೇರಿದಂತೆ ದೆಹಲಿ ಕರ್ನಾಟಕ ಸಂಘದ ಪ್ರಮುಖರು ಹಾಗೂ ಚೆನ್ನಮ್ಮನ ಅಭಿಮಾಗಳು ಉಪಸ್ಥಿತರಿದ್ದರು.