ಕಸಾಪದಿಂದ “ಕನ್ನಡ ಭವನದ ಕಟ್ಟಡಕ್ಕೆ 10 ಲಕ್ಷ ಅನುದಾನ ಬಿಡುಗಡೆ – ಹಸ್ತಾಂತರ

Must Read

ಬೆಳಗಾವಿ: ಸವದತ್ತಿ ತಾಲೂಕಿನ ದಡೆರಕೊಪ್ಪ ಗ್ರಾಮದಲ್ಲಿ ನಿರ್ಮಿಸುತ್ತಿರುವ ಡಾಕ್ಟರ್ ಶಂಬಾ ಜೋಶಿ ಕನ್ನಡ ಭವನದ ಕಟ್ಟಡದ ಸಲುವಾಗಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಹತ್ತು ಲಕ್ಷ ರೂಪಾಯಿಗಳ ಅನುದಾನದ ಚೆಕ್ ನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ಜಿ.ಪಂ.ರಾ. ಎಂಜಿನಿಯರಿoಗ್ ವಿಭಾಗ ಬೆಳಗಾವಿ ಇವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ ಅವರು ಕಟ್ಟಡ ನಿರ್ಮಾಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆ ನೀಡಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಂ ವೈ ಮೆಣಸಿನಕಾಯಿ, ಸಂಘಟನಾ ಕಾರ್ಯದರ್ಶಿ ವೀರಭದ್ರ ಅಂಗಡಿ ಹಾಗೂ ದಡೇರಕೊಪ್ಪ ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರಾಜಶೇಖರ್ ಸೌದತ್ತಿ ಮುಂತಾದವರು ಉಪಸ್ಥಿತರಿದ್ದರು.


ಮಾಹಿತಿ ವರದಿ: 
ಆಕಾಶ್ ಅರವಿಂದ ಥಬಾಜ
ಜಿಲ್ಲಾ ಸಹ ಮಾಧ್ಯಮ ಪ್ರತಿನಿಧಿ
ಕನ್ನಡ ಸಾಹಿತ್ಯ ಪರಿಷತ್, ಬೆಳಗಾವಿ ಜಿಲ್ಲೆ,  ಬೆಳಗಾವಿ 
9448634208
9035419700

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group