- Advertisement -
ಬೆಳಗಾವಿ: ಸವದತ್ತಿ ತಾಲೂಕಿನ ದಡೆರಕೊಪ್ಪ ಗ್ರಾಮದಲ್ಲಿ ನಿರ್ಮಿಸುತ್ತಿರುವ ಡಾಕ್ಟರ್ ಶಂಬಾ ಜೋಶಿ ಕನ್ನಡ ಭವನದ ಕಟ್ಟಡದ ಸಲುವಾಗಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಹತ್ತು ಲಕ್ಷ ರೂಪಾಯಿಗಳ ಅನುದಾನದ ಚೆಕ್ ನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ಜಿ.ಪಂ.ರಾ. ಎಂಜಿನಿಯರಿoಗ್ ವಿಭಾಗ ಬೆಳಗಾವಿ ಇವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ ಅವರು ಕಟ್ಟಡ ನಿರ್ಮಾಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆ ನೀಡಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಂ ವೈ ಮೆಣಸಿನಕಾಯಿ, ಸಂಘಟನಾ ಕಾರ್ಯದರ್ಶಿ ವೀರಭದ್ರ ಅಂಗಡಿ ಹಾಗೂ ದಡೇರಕೊಪ್ಪ ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರಾಜಶೇಖರ್ ಸೌದತ್ತಿ ಮುಂತಾದವರು ಉಪಸ್ಥಿತರಿದ್ದರು.
ಮಾಹಿತಿ ವರದಿ:
ಆಕಾಶ್ ಅರವಿಂದ ಥಬಾಜ
ಜಿಲ್ಲಾ ಸಹ ಮಾಧ್ಯಮ ಪ್ರತಿನಿಧಿ
ಕನ್ನಡ ಸಾಹಿತ್ಯ ಪರಿಷತ್, ಬೆಳಗಾವಿ ಜಿಲ್ಲೆ, ಬೆಳಗಾವಿ
9448634208
9035419700