ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100ಕ್ಕೆ 100ರಷ್ಟು ಫಲಿತಾಂಶ ಹೊಂದಿ ನಾಗನೂರ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂದು ಶಾಲೆಯ ಪ್ರಾಚಾರ್ಯ ಕೆ.ಎಸ್.ಮಾರಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಾಲೆಗೆ ತನ್ಮಯಿ ಪಾರಿಶ್ವಾಡ ಶೇ.99.52 (ಪ್ರಥಮ), ದರ್ಶನ ಕುಳ್ಳೂರ ಶೇ.98.88(ದ್ವಿತೀಯ), ದರ್ಶನ ಕವನಿ ಶೇ.98.08(ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ, ಪರೀಕ್ಷೆ ಬರೆದ ಒಟ್ಟು 51 ವಿದ್ಯಾರ್ಥಿಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ 38, ಉನ್ನತ ಶ್ರೇಣಿಯಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಾಧನೆ ಗೈದ ವಿದ್ಯಾರ್ಥಿಗಳನ್ನು ಬೆಳಗಾವಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ಪ್ರಾಚಾರ್ಯ ಕೆ.ಎಸ್.ಮಾರಾಪೂರ ಹಾಗೂ ನಿಲಯಪಾಲಕ ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿಗಳು ಹರ್ಷವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.