ಸವದತ್ತಿ: ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಬೆಳ್ಳುಬ್ಬಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮೇ ೫ ರಂದು ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ವೈ.ಎಂ.ಯಾಕೊಳ್ಳಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳುಬ್ಬಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ.ಮಾರುತಿ ಡೊಂಬರ ವಹಿಸಿಕೊಳ್ಳಲಿದ್ದು ಮುಖ್ಯ ಅತಿಥಿಗಳಾಗಿ ಹಿರಿಯ ಕಾದಂಬರಿಕಾರರು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆದ ಯ.ರು.ಪಾಟೀಲ ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ನರಗುಂದದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಎಸ್.ವ್ಹಿ.ಮನಗುಂಡಿ “ಕನ್ನಡ ಮನಸ್ಸುಗಳ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಬೀರಿದ ಪ್ರಭಾವ ” ಕುರಿತು ಉಪನ್ಯಾಸ ನೀಡಲಿದ್ದು ಸವದತ್ತಿಯ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ರಂಗ ನಿರ್ದೇಶಕರಾದ ಝಕೀರ ನದಾಫ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವೈ.ಬಿ.ಕಡಕೋಳ ತಿಳಿಸಿದ್ದಾರೆ.