- Advertisement -
ಬೀದರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಕುರುಬಗೊಂಡ ಸಮುದಾಯದಿಂದ ಬೀದರ್‌ನ ಬೀರಲಿಂಗೇಶ್ವರ ದೇವಸ್ಥಾನದಲ್ಲಿ 1100 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.
ಯಾವುದೇ ಅಡೆತಡೆ ಇಲ್ಲದೇ ಸಿದ್ದು ಸಿಎಂ ಆಗಲೇಂದು ಕುರುಬಗೊಂಡ ಸಮುದಾಯದ ನಾಯಕರು ನಗರದ ಕುಂಬಾರವಾಡ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸೇರಿ ಸಮುದಾಯದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಳಪ್ಪ ಅಡಸಾರೆ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು.