- Advertisement -
ಬೀದರ – ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ತರನಳ್ಳಿ ಗ್ರಾಮದ ಅಂಗನವಾಡಿಯೊಂದರಲ್ಲಿ ಕಳಪೆ ಆಹಾರ ಸೇವಿಸಿದ ೧೨ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.
ಕಳಪೆ ಆಹಾರ ಸೇವಿಸಿದ ಮಕ್ಕಳು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಎಲ್ಲರನ್ನೂ ಭಾಲ್ಕಿ ತಾಲೂಕಿನ ಹಲಬರ್ಗಾ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳಿಗೆ ಮಕ್ಕಳು ಸೇವಿಸುವ ಆಹಾರದಲ್ಲಿ ಹಲ್ಲಿಯ ಬಾಲ ಪತ್ತೆಯಾಗಿದ್ದು ಅಂಗನವಾಡಿ ಕಾರ್ಯಕರ್ತೆ ಹಾಗೂ ಅಡುಗೆ ಸಹಾಯಕಿಯ ನಿರ್ಲಕ್ಷ್ಯವೇ ಕಾರಣ ಎಂದು ಮಕ್ಕಳ ಪಾಲಕರು ಆರೋಪಿಸಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ