ಸಿಂದಗಿ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿಯಲ್ಲಿ ನಡೆಯುವ ಬಿ.ಎಸ್.ಡಬ್ಲ್ಯೂ ಕೋರ್ಸಿನ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯವು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಜರುಗಿದ 15ನೆಯ ಘಟಿಕೋತ್ಸವದಲ್ಲಿ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ ಪಡೆದ ಪ್ರಯುಕ್ತ ಸಮಾರಂಭದಲ್ಲಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಎಸ್.ಡಬ್ಲ್ಯೂ ವಿಭಾಗದ ವಿದ್ಯಾರ್ಥಿನಿ ಸುರೇಖಾ ಬಿರಾದಾರ ಚಿನ್ನದ ಪದಕವನ್ನು ಪಡೆದುಕೊಂಡು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿನಿಯ ನಿರಂತರ ಪರಿಶ್ರಮ, ಕಾಲೇಜಿನ ಉಪನ್ಯಾಸಕರ ಅತ್ಯುತ್ತಮ ಬೋಧನೆ ಪಾಲಕರ ಪ್ರೋತ್ಸಾಹದಿಂದ ಈ ಚಿನ್ನದ ಪದಕ ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮನ್ನರಾದ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪ್ರತಿಕ್ರಿಯಿಸಿ, ವಿದ್ಯಾರ್ಥಿಗೆ ಶುಭ ಹಾರೈಸಿದರು.
ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕ ಮಂಡಳಿ, ಪ್ರಾಚಾರ್ಯ ಎಸ್.ಎಂ.ಪೂಜಾರಿ, ಪತ್ರಿಕಾ ಪ್ರತಿನಿಧಿ ಮಹಾಂತೇಶ ನೂಲಾನವರ ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.