spot_img
spot_img

17 ಬೆಳೆಗಳ ಬೆಂಬಲ ಬೆಲೆ ಏರಿಕೆ – ಕಡಾಡಿ ಸ್ವಾಗತ

Must Read

ಮೂಡಲಗಿ: ಭತ್ತ-ರಾಗಿ ಸೇರಿದಂತೆ ದೇಶದ ಪ್ರಮುಖ 17 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದಲ್ಲಿ ನಡೆದ ಸಂಪುಟ ಸಮಿತಿ ಸಭೆಯು ಅನ್ನದಾತರ ಆದಾಯ ವೃದ್ಧಿಗೆ ಕ್ರಮಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಶುಕ್ರವಾರ ಜೂನ್ 9 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು, ಸಾಮಾನ್ಯವಾಗಿ ಬೆಳೆ ಮಾರುಕಟ್ಟೆಗೆ ಬಂದಾಗ ಮಾರುಕಟ್ಟೆ ಬೆಲೆಯನ್ನು ಆಧರಿಸಿ ಬೆಂಬಲ ಬೆಲೆಯ ಪರಿಷ್ಕರಣೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಬಿತ್ತನೆ ಸಮಯದಲ್ಲೇ ಬೆಂಬಲ ಬೆಲೆಯನ್ನು ನಿಗದಿ ಮಾಡಿರುವುದು ರೈತರ ಸಂತಸಕ್ಕೆ ಕಾರಣವಾಗಿದೆ ಎಂದರು.

ಭತ್ತದ ಬೆಂಬಲ ಬೆಲೆ ಕ್ವಿಂಟಾಲಗೆ 100 ಹೆಚ್ಚಿಸಿದ್ದು, ರೂ. 2040 ಆಗಲಿದೆ. ಜೋಳ, ಮೆಕ್ಕೆ ಜೋಳ, ರಾಗಿ, ಹೆಸರು, ತೊಗರಿ, ಶೇಂಗಾ, ಹತ್ತಿ ಬೆಲೆಯನ್ನು ಹೆಚ್ಚಳ ಮಾಡಿ ಕೃಷಿ ಕಾರ್ಯದಲ್ಲಿ ತೊಡಗುವ ರೈತರ ಉತ್ಸಾಹವನ್ನು ಹೆಚ್ಚಿಸಲಿದೆ. ಅನ್ನದಾತರ ಅಭಿವೃದ್ಧಿಗೆ ಈ ದಿಟ್ಟ ನಿರ್ಧಾರವನ್ನು ತೆಗೆದುಕೊಂಡ ಮಾನ್ಯ ಪ್ರಧಾನ ಮಂತ್ರಿಯವರಿಗೆ, ಮಾನ್ಯ ಕೇಂದ್ರ ಸರ್ಕಾರದ ಸಂಬಂಧಪಟ್ಟ ಸಚಿವರುಗಳಿಗೆ ಸಂಸದ ಈರಣ್ಣ ಕಡಾಡಿ ಅಭಿನಂದನೆ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!