ಬಾಗಲಕೋಟೆ: ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಬಾಲಕಿಯರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ 2025-26ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗ್ರಾಮದ ವಿಶ್ವಚೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ 20 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ಹನ್ನೆರಡು ಸ್ಪರ್ಧೆಗಳಲ್ಲಿ ಪ್ರಥಮ, ನಾಲ್ಕು ಸ್ಪರ್ಧೆಗಳಲ್ಲಿ ದ್ವಿತೀಯ, ಆರು ಸ್ಪರ್ಧೆಗಳಲ್ಲಿ ತೃತೀಯ ಸ್ಥಾನ ಪಡೆದು ಕ್ಲಸ್ಟರ್ ಮಟ್ಟದಲ್ಲಿ ಅತೀ ಹೆಚ್ಚು ಬಹುಮಾನಗಳನ್ನು ಪಡೆದ ಶಾಲೆ ವಿಶ್ವ ಚೇತನ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದರಲ್ಲಿ ಸ್ವಾಮಿ ಅಯ್ಯಪ್ಪನ ಪ್ರತಿಮೆ ಎಲ್ಲರ ಮೆಚ್ಚುಗೆ ಗಳಿಸಿ ಹೊರಹೊಮ್ಮಿದ್ದು ವಿಶೇಷ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಸಂಗಣ್ಣ ಹವಾಲ್ದಾರ , ಸಿ ಆರ್ ಪಿ ಗಳಾದ ಶಾಂತಕುಮಾರ ಕುಟಗಮರಿ. ಸಬರದ ಗುರುಗಳು. ಶಾಲೆಯ ಮುಖ್ಯ ಗುರುಗಳಾದ ರೇಷ್ಮ ಗಾವಡಿ. ಗ್ರಾಮದ ಶಿಕ್ಷಣ ಪ್ರೇಮಿಗಳಾದ ಪಂಪಣ್ಣ ಸಜ್ಜನ. ಸಾಹಿತಿ ನಾಗೇಶ್ ನಿಲೋಗಲ್ಲ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

