ಸಿಂದಗಿ: ಮತಕ್ಷೇತ್ರದ ಅಭ್ಯರ್ಥಿಯಾಗಿದ್ದ ದಿ.ಶಿವಾನಂದ ಪಾಟೀಲರ ಅಗಲಿಕೆಗೆ ಫೆಬ್ರುವರಿ 02 ರಂದು ಜೆಡಿಎಸ್ ಕಾರ್ಯಕರ್ತರು ಹಾಗೂ ದಿ.ಶಿವಾನಂದ ಪಾಟೀಲರ ಅಭಿಮಾನಿಗಳು ಸೇರಿ ಶಹಾಪುರ ಪೆಟ್ರೋಲ್ ಪಂಪ್ ಪಕ್ಕದಲ್ಲಿ ಶುಭನುಡಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರಣ ಕಾರ್ಯಕ್ರಮಕ್ಕೆ ಕ್ಷೇತ್ರದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಅವರ ಆತ್ಮಕ್ಕೆ ಶಾಂತಿ ಕೋರಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ...
ಸಂಸಾರದ ಬಂಡಿ ಸರಾಗವಾಗಿ ಸಾಗಬೇಕಾದರೆ ಗಂಡ ಹೆಂಡತಿ ಎನ್ನುವ ಎರಡು ಗಾಲಿಗಳು ಸಮಸಮವಾಗಿ ಚಲಿಸಬೇಕು. ಎರಡೂ ಗಾಲಿಗಳಿಗೆ ಪ್ರಾಧಾನ್ಯತೆಯಿದೆ. ಒಂದು ಹೆಚ್ಚು ಒಂದು ಕಡಿಮೆ ಇಲ್ಲ. ಒಂದು ಶ್ರೇಷ್ಠ ಇನ್ನೊಂದು ಕನಿಷ್ಠವೂ ಇಲ್ಲ. ಪ್ರತಿಯೊಂದು ಮನೆಯಲ್ಲೂ ಗಂಡ ಹೆಂಡಿರ ಜಗಳ ಇದ್ದೇ ಇರುತ್ತದೆ. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಮಾತು...
ಖುಷಿ ಯಾರಿಗೆ ಬೇಡ ಹೇಳಿ? ಪ್ರತಿ ದಿನ ಪ್ರತಿ ಕ್ಷಣ ನಾವೆಲ್ಲ ಬೆನ್ನು ಹತ್ತಿರುವುದು ಖುಷಿಯ ಹಿಂದೆ. ಅಂದ ಹಾಗೆ ಖುಷಿ ಎಂದರೇನು? ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಾ ಹೊರಟರೆ ಅದೊಂದು ಕೃತಜ್ಞತೆಯ ಭಾವನಾತ್ಮಕ ಸ್ಥಿತಿ ಎಂದು ತಿಳಿದು ಬರುತ್ತದೆ. ಖುಷಿ ಒಂದೇ ತೆರನಾಗಿ ಇರುವುದಿಲ್ಲ.
ಒಬ್ಬರಿಗೆ ಖುಷಿ ನೀಡಿದ ಸಂಗತಿ ಇನ್ನೊಬ್ಬರಿಗೆ ಬೇಸರ ಹುಟ್ಟಿಸಬಹುದು....
ಬೆಳಗಾವಿ: ತಾಲೂಕಿನ ವಿಜಯನಗರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಜಾತಾ ಶಿವಶಂಕರ ಅರಳಗುಂಡಿ ಯವರಿಗೆ ಅಭಿನಂದನಾ ಸಮಾರಂಭ ಹಾಗೂ ರಥ ಸಪ್ತಮಿ, ಭೀಷ್ಮಾಷ್ಟಮಿ ನಿಮಿತ್ತ ಸ್ನೇಹ ಭೋಜನ ಕಾರ್ಯಕ್ರಮ ಜರುಗಿತು.
ನಿವೃತ್ತ ಬ್ಯಾಂಕ ಅಧಿಕಾರಿಗಳಾದ ಆರ್ ವಿ ಭಟ್ ದಂಪತಿಗಳು, ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ರಾಜೇಶ್ವರಿ ಆರ್ ಕುಲಕರ್ಣಿ...
ಸವದತ್ತಿ: ಒಂದು ರಾಷ್ಟ್ರ ವಿಕಾಸವಾಗಬೇಕಾದರೆ ಅಲ್ಲಿನ ಸ್ಥಳೀಯ ಭಾಷೆಗಳು ಜೀವಂತವಾಗಿರಬೇಕು. ಭಾಷೆ ಜೀವಂತವಾಗಿದ್ದರೆ ಆ ಜನಾಂಗದ ಸಂಸ್ಕೃತಿ ಜೀವಂತವಾಗಿರುತ್ತದೆ. ಆ ಜನಾಂಗದ ಸಂಸ್ಕೃತಿ ಜೀವಂತವಾಗಿದ್ದರೆ ಅಲ್ಲಿನ ಸಾಮಾಜಿಕ ಪರಿಸರ ಉತ್ತಮವಾಗಿರುತ್ತದೆ.
ಅದಕ್ಕಾಗಿ ಮಾತೃಭಾಷೆಯಲ್ಲಿ ಶಿಕ್ಷಣ ಸಿಗುವಂತಾದರೆ ಮಾತ್ರ ಪ್ರಾದೇಶಿಕ ಭಾಷೆಗಳು ಉಳಿಯಲು ಸಾಧ್ಯ ಎಂದು ನವದೆಹಲಿಯ ಪಿಜಿಡಿಎವಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಹರೀಶ್ ಅರೋರಾ ನುಡಿದರು.
ಅವರು ಪಟ್ಟಣದ...
ಬೆಳಗಾವಿ: ಶೈಕ್ಷಣಿಕ ಪ್ರವಾಸಗಳು ವಿದ್ಯಾರ್ಥಿಗಳಿಗೆ ವಿಶೇಷ ಆಕರ್ಷಣೆಯಾಗಿದೆ. ಆದಾಗ್ಯೂ, ಆರ್ಥಿಕ ಪರಿಸ್ಥಿತಿಗಳಿಂದಾಗಿ, ಅನೇಕ ವಿದ್ಯಾರ್ಥಿಗಳು ಪ್ರವಾಸದ ಅನುಭವವನ್ನು ಕಳೆದುಕೊಳ್ಳಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರ ಸಮಾಜ ಸೇವಾ ಸಂಸ್ಥೆಯಾದ ವೇದಾಂತ ಫೌಂಡೇಶನ್ ಸರ್ಕಾರಿ ಶಾಲೆ ನಂ.9ರ ವಿದ್ಯಾರ್ಥಿಗಳಿಗೆ ಪ್ರವಾಸ ಕೈಗೊಂಡು ವಿದ್ಯಾರ್ಥಿಗಳಿಗೆ ವಿಶಿಷ್ಟ ಅನುಭವ ನೀಡಿತು.
ವಾರ್ಡ್ ಸಂಖ್ಯೆ 43 ರ ಕಾರ್ಪೊರೇಟರ್ ವಾಣಿ ಜೋಶಿ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ...
ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ ಡಾ. ಶಾಂತಿನಾಥ ದಿಬ್ಬದ ಆಯ್ಕೆ
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಬೈಲಹೊಂಗಲ ತಾಲೂಕು 7ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಪೆಬ್ರುವರಿ 3 ರಂದು ನಡೆಯಲಿದೆ.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ ಡಾ.ಶಾಂತಿನಾಥ ದಿಬ್ಬದ ಆಯ್ಕೆಯಾಗಿದ್ದಾರೆ ಎಂದು ಬೈಲಹೊಂಗಲ ಕಸಾಪ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ನಡೆದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ...
ಪಂಚಮಸಾಲಿ ಶಕ್ತಿ ತೋರಿಸಬೇಕಾಗುತ್ತದೆ - ನಿಂಗಪ್ಪ ಫಿರೋಜಿ
ಮೂಡಲಗಿ: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಪಂಚಮಸಾಲಿಗಳ ಬಗ್ಗೆ ಕೇಳಿದ ಪ್ರಶ್ನೆಗೆ ರಮೇಶ ಜಾರಕಿಹೊಳಿ ಅವರು ಉತ್ತರಿಸುವ ಸಂದರ್ಭದಲ್ಲಿ ಪಂಚಮಸಾಲಿಗಳ ಹೋರಾಟದಲ್ಲಿ ಕೆಲವು ನಾಯಿಗಳಿವೆ ಎಂದು ನಾಲಿಗೆ ಹರಿಬಿಟ್ಟಿರೋದನ್ನು ಅಖಿಲ ಭಾರತ ಪಂಚಮಸಾಲಿ ಮಹಾಸಭಾ ಕಠೋರವಾಗಿ ಖಂಡಿಸುತ್ತದೆ ಎಂದು ಪಂಚಮಸಾಲಿ ಸಂಘಟನೆಯ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ...
ಬೆಳಗಾವಿ: ಜ. 29 ಮತ್ತು 30 ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೆನ್ಸಿ ಕ್ಲಬ್‌ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ ನಡೆಯಲಿದೆ.
ಮ.12 ಗಂಟೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಸಭೆಯ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ರೈತ ನಾಯಕರಾದ ಬಿ.ಎಸ್....
ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ ಸಮಾರಂಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ
ಮೂಡಲಗಿ: ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಸಹಕಾರ ಸಂಘಗಳನ್ನು ಹೊಂದಿರುವ ಮೂಡಲಗಿ ಪಟ್ಟಣಕ್ಕೆ “ಸಹಕಾರ ನಗರ” ಎಂಬ ಬಿರುದನ್ನು ನೀಡಲು ಸರ್ಕಾರದ ಮಟ್ಟದ ಚಿಂತನೆ ನಡೆಸುತ್ತಿರುವುದಾಗಿ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಶುಕ್ರವಾರ ಸಂಜೆ ಪಟ್ಟಣದ ಬಸವ ರಂಗ ಮಂಟಪದಲ್ಲಿ ಜರುಗಿದ ಪ್ರಾಥಮಿಕ ಕೃಷಿ...
ಮೂಡಲಗಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾದ ಅನುದಾನದ ಹಣವನ್ನು ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸಿಕೊಂಡಿದ್ದು, ಅದು ದಲಿತ...