ಮೂಡಲಗಿ: ರಾಜ್ಯದಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ 224 ಆಯುಷ್ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತವೆ ಎಂದು ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಮಂಗಳವಾರ ಡಿ.14 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ ಆಯಷ್ ಸಚಿವಾಲಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದಲ್ಲಿ 3739 ಆಯುಷ್ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, 2014-15 ರಿಂದ 2020-21 ರ ಅವಧಿಯಲ್ಲಿ ರಾಜ್ಯದಲ್ಲಿ 637 ಆಯುಷ್ ಆಸ್ಪತ್ರೆಗಳನ್ನು ರೂ.5,894.12 ಲಕ್ಷ ರೂ.ಗಳಲ್ಲಿ ಮೇಲ್ದರ್ಜೆಗೇರಿಸಲಾಗಿದೆ.
ಕರ್ನಾಟಕ ರಾಜ್ಯ ಸೇರಿದಂತೆ ದೇಶದಲ್ಲಿ 2756 ಆಯುಷ್ ಆಸ್ಪತ್ರೆಗಳನ್ನು ರೂ. 19,413.44 ಲಕ್ಷ ರೂ.ಗಳಲ್ಲಿ ಮೇಲ್ದರ್ಜೆಗೇರಿಸಲಾಗಿದೆ ಮತ್ತು ದೇಶದಲ್ಲಿ 102 ಆಯುಷ್ ಆಸ್ಪತ್ರೆಗಳನ್ನು 52,659 ಲಕ್ಷ ರೂ. ಗಳಲ್ಲಿ 50 ಹಾಸಿಗೆಗಳ ಆಸ್ಪತ್ರೆಗಳನ್ನಾಗಿ ಸಂಯೋಜಿಸಲಾಗಿದೆ ಎಂದರು.