25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ

ಗೋಕಾಕ : ಹಿಡಕಲ್ ಜಲಾಶಯದಿಂದ ಡಿ. 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

- Advertisement -

ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುವುದು. ಡಿ. 25 ರಿಂದ ಜ. 10 ರವರೆಗೆ ಸುಮಾರು 6.80 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರನ್ನು ಪೋಲು ಮಾಡಬಾರದು. ಕೃಷಿ ಜಮೀನುಗಳಿಗೆ ಅನುಕೂಲವಾಗಲು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದಿಂದ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಅವರು ಆದೇಶ ನೀಡಿದ್ದಾರೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!