ಪ್ರಭಾಶುಗರ್ ಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ. : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ

Must Read

ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು.

ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು ಪಾವತಿಸಲಾಗುವುದು ಎಂದು ಹೇಳಿದರು.

ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ ಉತ್ತಮ ಇಳುವರಿಯ ಕಬ್ಬನ್ನು ಪೂರೈಕೆ ಮಾಡುವಂತೆ ರೈತರಲ್ಲಿ ಕೋರಿಕೊಂಡಿರುವ ಅವರು, ರೈತರ ಸಹಕಾರದಿಂದ ನಮ್ಮ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಅವರು ಹೇಳಿದರು.

ಬಾಲಚಂದ್ರ ಜಾರಕಿಹೊಳಿ ಅವರು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ 20 ದಿನಗಳಿಗೊಮ್ಮೆ ಅವರ ಬ್ಯಾಂಕ್ ಖಾತೆಗಳಿಗೆ ಬಿಲ್ಲನ್ನು ಸಂದಾಯ ಮಾಡಲಾಗುವುದು. ನಮ್ಮ ನೆರೆ ಹೊರೆಯ ಕಾರ್ಖಾನೆಗಳು ನೀಡುವ ದರವನ್ನು ನಾವು ನೀಡುತ್ತೇವೆ ಎಂದು ಈ ಹಿಂದೆಯೇ ರೈತರ ಸಭೆಯಲ್ಲಿ ಹೇಳಲಾಗಿತ್ತು. ಅದರಂತೆಯೇ ಜಿಲ್ಲೆಯ ಬಹುತೇಕ ಕಾರ್ಖಾನೆಗಳು ಈಗಾಗಲೇ ದರವನ್ನು ಘೋಷಿಸಿದ್ದು, ಅದರನ್ವಯ ಈ ಬಾರಿ ಪ್ರತಿ ಟನ್ ಕಬ್ಬಿಗೆ ರೂಪಾಯಿ 2700 ಗಳನ್ನು ಆಡಳಿತ ಮಂಡಳಿಯ ನಿರ್ಣಯದಂತೆ ಘೋಷಿಸಲಾಗಿದೆ. ರೈತರ ಸಹಕಾರವೇ ನಮ್ಮ ಕಾರ್ಖಾನೆಗೆ ಶ್ರೀರಕ್ಷೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಖಾನೆಯಲ್ಲಿ ಆಯೋಜಿಸಿದ್ದ ಪೂಜಾ ಸಮಾರಂಭದಲ್ಲಿ ಭಾಗವಹಿಸಿದರು. ನಂತರ ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಅಭಿನಂದನ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಕಾರ್ಖಾನೆಯ ಸಿಇಓ ನಿತೀನ ಪಾಟೀಲ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group