spot_img
spot_img

ಗ್ರಾಮೀಣ ಸಮುದಾಯಗಳಿಗೆ ತಂತ್ರಜ್ಞಾನ ಬೆಂಬಲಕ್ಕೆ ರೂ.278 ಕೋಟಿ

Must Read

- Advertisement -

ನವದೆಹಲಿ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮತ್ತು ದುರ್ಬಲ ಸಮುದಾಯಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಬೆಂಬಲ ಒದಗಿಸಲು 2021-22ನೇ ಸಾಲಿನಲ್ಲಿ 278.13 ಕೋಟಿ ರೂ ಅನುದಾನ ಮಂಜೂರಾಗಿದ್ದು, 266.90 ಕೋಟಿ ರೂ ಅನುದಾನ ಬಳಕೆ ಮಾಡಲಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕರ್ನಾಟಕದಲ್ಲಿ ದುರ್ಬಲ ಸಮುದಾಯಗಳ ಬೆಂಬಲ ನೀಡಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನಲ್ಲಿ ಎಸ್.ಸಿ/ಎಸ್.ಟಿ ಕೋಶವನ್ನು ಸ್ಥಾಪಿಸಲಾಗಿದೆ. ಚಿತ್ರದುರ್ಗ ಜಿಲ್ಲೆಗೆ ಸೇರಿದ ಎಸ್‍ಸಿ ಸಮುದಾಯಗಳ ಅಭಿವೃದ್ಧಿಗೆ ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್‍ನ ಚಳ್ಳಕೆರೆ ಕ್ಯಾಂಪಸ್‍ನಲ್ಲಿ 5.79 ಕೋಟಿ ರೂ. ಮ್ಯಾಪಿಂಗ್‍ಗಾಗಿ “ಪರಿಶಿಷ್ಟ ಜಾತಿ (ಎಸ್‍ಸಿ)/ಪರಿಶಿಷ್ಟ ಪಂಗಡ ಕೋಶಗಳ ಸ್ಥಾಪನೆ”ಯನ್ನು ಬೆಂಬಲಿಸುತ್ತಿದೆ ಎಂದು ತಿಳಿಸಿದ್ದಾರೆ.

ರೈತ ಉತ್ಪಾದಕ ಸಂಸ್ಥೆಗಳು, ಸ್ವ ಸಹಾಯ ಗುಂಪುಗಳು ಮತ್ತು ಉತ್ಪಾದಕರ ಸಹಕಾರಿ ಸಂಸ್ಥೆಗಳನ್ನು ಬೆಂಬಲಿಸುತ್ತದೆ. ರೈತರು ಉದ್ಯಮಿಗಳಾಗಲು ಸುಮಾರು 400 ರೈತರಿಗೆ ಆಹಾರ ಸಂಸ್ಕರಣೆಯ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗಿದೆ. 200 ರೈತರು /ಫಲಾನುಭವಿಗಳು/ಎಫ್‍ಪಿಒಗಳಿಗೆ ಹಾಸನ, ಕೊಡಗಿನಲ್ಲಿ ಆಹಾರ ಸಂಸ್ಕರಣೆಯ ನಿರ್ದಿಷ್ಟ ಕ್ಷೇತ್ರಗಳ ಕುರಿತು ತರಬೇತಿ ನೀಡಲಾಗಿದೆ. ಬೆಳಗಾವಿ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಮೊಬೈಲ್ ತೆಗೆದುಕೊಂಡು ರೈತರಿಗೆ ತರಬೇತಿ ನೀಡಲು ಮೊಬೈಲ್ ಆಹಾರ ಸಂಸ್ಕರಣೆ ಮತ್ತು ಪ್ರಾತ್ಯಕ್ಷಿಕೆ ಘಟಕವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ ಮಾಹಿತಿ ಹಂಚಿಕೊಂಡರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group