ಮೂಡಲಗಿ: ಪ್ರಸ್ತುತ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಅಡಿಯಲ್ಲಿ 5 ಪಾಸ್‌ಪೋರ್ಟ್ ಸೇವಾ ಕೇಂದ್ರಗಳು ಮತ್ತು 23 ಅಂಚೆ ಇಲಾಖೆಯ ಮೂಲಕ ಪಾಸ್‌ಪೋರ್ಟ್ ಸೇವಾ ಕೇಂದ್ರಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಕೀರ್ತಿ ವರ್ಧನ್‌ಸಿಂಗ್ ಅವರು ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಮಳೆಗಾಲ ಅಧಿವೇಶದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ದೇಶದಲ್ಲಿ 93 ಪಾಸ್‌ಪೋರ್ಟ್ ಸೇವಾ ಕೇಂದ್ರಗಳು ಮತ್ತು 440 ಅಂಚೆ ಇಲಾಖೆಯ ಮೂಲಕ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಂಗಳೂರಿನಲ್ಲಿ (ಎರಡು) ಧಾರವಾಡ-ಹುಬ್ಬಳ್ಳಿ, ಕಲಬುರಗಿ, ಮಂಗಳೂರಿನಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಬೆಳಗಾವಿ ಸೇರಿದಂತೆ 22 ಜಿಲ್ಲೆಗಳಲ್ಲಿ ಅಂಚೆ ಇಲಾಖೆಯ ಕಛೇರಿಯಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ ವರ್ಷ ರಾಜ್ಯದಲ್ಲಿ 8 ಲಕ್ಷ 35 ಸಾವಿರ ಪಾಸ್‌ಪೋರ್ಟ್ಗಳನ್ನು ನೀಡಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ