ಜುಲೈ 3 ರಂದು ಶ್ರೀಕೃಷ್ಣ ರುಕ್ಮಿಣಿ ಸಾಂಸ್ಕೃತಿಕ ಕಲಾ ವೇದಿಕೆಯ ದ್ವಿತೀಯ ವಾರ್ಷಿಕೋತ್ಸವ

Must Read

ಬೆಂಗಳೂರು – ನಗರದ ಕೆ. ಆರ್. ಪುರಂನ ಮುನಿಯಪ್ಪ ಗಾರ್ಡನ್ ಬಡಾವಣೆ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 3 ಭಾನುವಾರ ಮಧ್ಯಾಹ್ನ 2.30ಕ್ಕೆ ಶ್ರೀಕೃಷ್ಣ ರುಕ್ಮಿಣಿ ಸಾಂಸ್ಕೃತಿಕ ಕಲಾ ವೇದಿಕೆಯ ದ್ವಿತೀಯ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ.

ವಿದ್ವಾನ್ ಆಯನೂರು ಮಧುಸೂದನಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿ ಪ್ರವಚನ ನಡೆಸಿಕೊಡುವರು.

ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ , ಸಮಾಜ ಸೇವಕರಾದ ಲಕ್ಷ್ಮಿ ಹರೀಶ್ , ಕೆ.ವಿ.ಭಾಸ್ಕರ್ ನಾಯ್ಡು ,ರಂಗವಿಠಲ ಹರಿದಾಸ ಸಂಗೀತ ಶಾಲೆಯ ಸಂಸ್ಥಾಪಕ ಖ್ಯಾತ ಗಾಯಕ ಬೈರಾಪುರ ಸತ್ಯನಾರಾಯಣ ಭಾಗವಹಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಕೆ. ಆರ್. ಪುರಂ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದ ವ್ಯವಸ್ಥಾಪಕ ವಿದ್ವಾನ್ ಮುರಳಿಧರಾಚಾರ್ಯರು ವಹಿಸಿಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕ ರಾದ ಶ್ರೀಕೃಷ್ಣ ರುಕ್ಮಿಣಿ ಸಾಂಸ್ಕೃತಿಕ ಕಲಾ ವೇದಿಕೆಯ ಸಂಸ್ಥಾಪಕ ಸಂಜೀವ ಕೃಷ್ಣಜಿ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group