ಮೂಡಲಗಿ: ಕೇಂದ್ರ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಭಾರತ ಕ್ರೀಡಾ ಪ್ರಾಧಿಕಾರದಿಂದ ಖೇಲೋ ಇಂಡಿಯಾ ಯೋಜನೆಗೆ ರೂ. 314.14 ಕೋಟಿ ಹಾಗೂ ರಾಷ್ಟ್ರೀಯ ಕ್ರೀಡಾ ಅಭಿವೃದಿ ನಿಧಿಗೆ ರೂ. 8.33 ಕೋಟಿ ಒದಗಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಹೇಳಿದರು.
ನವದೆಹಲಿ ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು ಕರ್ನಾಟಕ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿ ಯೋಜನೆಯಗಳ ಕುರಿತು ಚುಕ್ಕಿ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಖೇಲೋ ಇಂಡಿಯಾ ಯೋಜನೆ, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳಿಗೆ ಸಹಾಯ, ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರು ಮತ್ತು ಅವರ ತರಬೇತುದಾರರಿಗೆ ವಿಶೇಷ ಪ್ರಶಸ್ತಿಗಳು, ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳು, ಕ್ರೀಡಾ ವ್ಯಕ್ತಿಗಳ ಪಿಂಚಣಿಯ ಸೌಲಭ್ಯ, ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ ಮತ್ತು ಕ್ರೀಡಾ ತರಬೇತಿ ಕೇಂದ್ರಗಳ ಮೂಲಕ ನಡೆಯುತ್ತವೆ ಎಂದು ಉತ್ತರಿಸಿದ್ದಾರೆ.