spot_img
spot_img

ಒಂದೇ ವೇದಿಕೆ ಮೇಲೆ 400 ಜೋಡಿ ಸರಳ ಮದುವೆ

Must Read

ಬೀದರ – ಗಡಿ ಜಿಲ್ಲೆ ಬೀದರ್ ಚಿಟ್ಟಗುಪ್ಪಾ ತಾಲ್ಲೂಕಿನ ಮನ್ನ ಎಖೇಳಿ ಗ್ರಾಮದಲ್ಲಿ ಒಂದೇ ವೇದಿಕೆ ಮೇಲೆ ಸರಳ ವಿವಾಹದಲ್ಲಿ 400 ಜೋಡಿಗಳು ಏಕ ಕಾಲಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಜಿಲ್ಲೆಯ ಚಿಟಗುಪ್ಪ ತಾಲೂಕಿನ ರೇಕುಳಗಿ ಗ್ರಾಮದ ಹೊರ ವಲಯದಲ್ಲಿರುವ ಬುದ್ಧ ವಿಹಾರದಲ್ಲಿ ಮಹಾ ಮಾನವ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ ಸರಳ ಸಾಮೂಹಿಕ ವಿವಾಹದಲ್ಲಿ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ 400 ಜೋಡಿಗಳು ಮದುವೆಯಾದರು.

ಸರಳವಾಗಿ ಮದುವೆಯಾಗುವುದರಿಂದ ಮದುವೆಯ ದುಂದು ವೆಚ್ಚಕ್ಕೆ ಕಡಿವಾಣ ಬಿದ್ದಿದ್ದು ಆರ್ಥಿಕ ಹೊರೆಯಿಂದ ತಪ್ಪಿಸಿಕೊಳ್ಳಲು ಸರಳವಾಗಿಯೇ ಮದುವೆಯಾಗ ಬೇಕು ಎಂದು ಸಮಾರಂಭದಲ್ಲಿ ಪಾಲ್ಗೊಂಡವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ನಿಗಮ ಮಂಡಳಿ ಅಧ್ಯಕ್ಷ ಡಾ.ಶೈಲೇಂದ್ರ ಬೇಲ್ದಾಳೆ, ಮುಖಂಡರಾದ ಅನೀಲ ಬೆಳ್ದಾರ್, ಮಾರುತಿ ಬೌದ್ದೆ, ಅಬ್ದುಲ್ ಮನ್ನಾನ್ ಶೇಠ್, ಸಂಗಮೇಶ ನಾಸಿಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕೌಜಲಗಿ ಹೊಸ ತಾಲೂಕು ರಚನೆಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ ಕೌಜಲಗಿ(ತಾ.ಗೋಕಾಕ): ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್...
- Advertisement -

More Articles Like This

- Advertisement -
close
error: Content is protected !!