spot_img
spot_img

ಅರಭಾವಿ ಕ್ಷೇತ್ರದಿಂದ ೫ ಸಾವಿರ ಜನ ಜೋಡೋ ಯಾತ್ರೆಯಲ್ಲಿ – ದಳವಾಯಿ

Must Read

ಮೂಡಲಗಿ: ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನರು ಕಾಂಗ್ರೆಸ್ ನ ಭಾರತ ಜೋಡೋ ಯಾತ್ರೆಯಲ್ಲಿ  ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು.

ಗುರುವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ ಐಕ್ಯತೆಯ ದೃಷ್ಟಿಯಲ್ಲಿ ಭಾರತ ಜೋಡೋ ಯಾತ್ರೆ ಹಮ್ಮಿಕೊಂಡಿದ್ದಾರೆ ಆದ್ದರಿಂದ ಬಳ್ಳಾರಿ ಜಿಲ್ಲೆಯ ರಾಮಪೂರದಲ್ಲಿ ಅ.14ರಂದು ನಡೆಯಲ್ಲಿರುವ ಜೋಡೋ ಯಾತ್ರೆಯಲ್ಲಿ ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಹಳ್ಳಿ-ಹಳ್ಳಿಗಳಿಂದ ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ನಡೆಯುವ ಯಾತ್ರೆಯು ಯಶ್ವಸಿಯಾಗಲಿದೆ ಎಂದರು.

ಬಿಜೆಪಿ ಸರ್ಕಾರ ಇಡೀ ದೇಶದಲ್ಲಿ ಮೊದಲಿನಿಂದಲೂ ಧರ್ಮಗಳ ಮಧ್ಯೆ ಕಲಹ ಉಂಟು ಮಾಡಿ ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೌಜಲಗಿಯ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ಅರಳಿ, ವೆಂಕಟಗೌಡ ಪಾಟೀಲ, ಪರುಶುರಾಮ ದಳವಾಯಿ, ಇರ್ಷಾದ ಪೈಲ್ವಾನ್ ಇದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!