spot_img
spot_img

ಆತ್ಮ ನಿರ್ಭರ್ ಭಾರತ ರೋಜಗಾರ ಯೋಜನೆಯಡಿ 50 ಲಕ್ಷ ಉದ್ಯೋಗ

Must Read

- Advertisement -

ಮೂಡಲಗಿ: ಸಾಮಾಜಿಕ ಭದ್ರತೆ ಪ್ರಯೋಜನಗಳ ಜೊತೆಗೆ ಹೊಸ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆಯಡಿ ದೇಶದ 1.32 ಲಕ್ಷ ಸಂಸ್ಥೆಗಳ ಮೂಲಕ 50.81 ಲಕ್ಷ ಫಲಾನುಭವಿಗಳಿಗೆ ಪ್ರಯೋಜನಗಳನ್ನು ಒದಗಿಸಲಾಗಿದೆ. ರಾಜ್ಯದಲ್ಲಿ 9265 ಸಂಸ್ಥೆಗಳ ಮೂಲಕ 4.02 ಲಕ್ಷ ಫಲಾನುಭವಿಗಳಿಗೆ ಪ್ರಯೋಜನಗಳನ್ನು ಒದಗಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವ ರಾಮೇಶ್ವರ ತೇಲಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.

ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆ ಕುರಿತು ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಹೊಸ ಉದ್ಯೋಗವನ್ನು ಸೃಷ್ಟಿಸಲು ಉದ್ಯೋಗದಾತರನ್ನು ಉತ್ತೇಜಿಸುವುದು ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕಳೆದುಹೋದ ಉದ್ಯೋಗವನ್ನು ಪುನಃ ಸ್ಥಾಪಿಸುವುದು ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆ ಉದ್ದೇಶವಾಗಿದೆ ಎಂದು ಮಾನ್ಯ ಸಚಿವರು ಉತ್ತರಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.

- Advertisement -
- Advertisement -

Latest News

ಗುರ್ಲಾಪೂರ ಗ್ರಾಮಕ್ಕೆ ಸಂಸದೆ ಮಂಗಳಾ ಅಂಗಡಿ ಭೇಟಿ

ಗುರ್ಲಾಪೂರ- ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಗುರ್ಲಾಪೂರ ಗ್ರಾಮಕ್ಕೆ ಇತ್ತಿಚೆಗೆ ಬೆಳಗಾವಿಯ ಲೋಕಸಭಾ ಸದಸ್ಯರಾದ ಶ್ರೀಮತಿ ಮಂಗಳಾ ಸುರೇಶ ಅಂಗಡಿ ಇವರು ಪ್ರಥಮ ಬಾರಿಗೆ ಭೇಟಿ...
- Advertisement -

More Articles Like This

- Advertisement -
close
error: Content is protected !!
Join WhatsApp Group