6-7 ನೇ ತರಗತಿ ಶಾಲಾರಂಭ; ಶಿಕ್ಷಕ ವರ್ಗ, ಮಕ್ಕಳಲ್ಲಿ ಹರ್ಷದ ಛಾಯೆ – ಪತ್ರಕರ್ತ ಮಲ್ಲು

Must Read

ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ...

ಹೆಣ್ಣು ಮಕ್ಕಳು ಪೌಷ್ಠಿಕ ಆಹಾರ ಸೇವನೆ ಮಾಡಬೇಕು – ಡಾ.ನಯನಾ ಭಸ್ಮೇ

ಸವದತ್ತಿ - “ಹೆಣ್ಣು ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಸದೃಢವಾಗಿರಬೇಕು ಅವರು ಹದಿ ಹರೆಯದ ವಯಸ್ಸಿಗೆ ಬಂದಾಗ ಅವರಲ್ಲಿ ನೈಸರ್ಗಿಕವಾದ ಬದಲಾವಣೆಗಳು ಆಗುತ್ತವೆ ಅಂತಹ ಸಂದರ್ಭದಲ್ಲಿಯೂ...

ಪ್ರೊ.ಅಲಕಾ ಕುರಣೆ ಯವರಿಗೆ ‘ ಶಿಕ್ಷಕ ಶ್ರೀ ‘ ರಾಜ್ಯ ಮಟ್ಟದ ಪ್ರಶಸ್ತಿ

ಬೆಳಗಾವಿ: ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ, ಧಾರವಾಡ ಬೆಂಗಳೂರು ಘಟಕದಿಂದ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳಗಾವಿಯ...

ಮೂಡಲಗಿ: ಮೂರನೇ ಅಲೆಯ ಆತಂಕದ ನಡುವೆ ಕಳೆದ ಎರಡು ವರ್ಷದಿಂದ ಸ್ಥಗಿತಕೊಂಡಿರುವ ಪ್ರಾಥಮಿಕ ಶಾಲೆಗಳು ಕ್ರಮೇಣವಾಗಿ ಪ್ರಾರಂಭವಾಗುತ್ತಿದ್ದು, ಶಿಕ್ಷಕರಿಗೆ, ಮಕ್ಕಳಿಗೆ ಹಾಗೂ ಪಾಲಕರ ಮುಖದಲ್ಲಿ ಸಂತಸದ ಛಾಯೆ ಮೂಡಿದೆ ಎಂದು ಪತ್ರಕರ್ತ ಮಲ್ಲು ಬೋಳನವರ ಹೇಳಿದರು.

ಸೋಮವಾರದಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ 6ರಿಂದ 7ನೇ ತರಗತಿಯ ಶಾಲಾ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಶ್ರೀ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕೊರೋನಾ ಸೋಂಕು ಒಂದೆರಡು ವರ್ಷ ಜಗತ್ತಿಗೆ ಆರ್ಥಿಕ ಹಿಂಜರಿತವನ್ನಷ್ಟೇ ನೀಡಿಲ್ಲ. ಬದಲಿಗೆ ದೀರ್ಘಕಾಲಿಕ ಸಮಸ್ಯೆಗಳನ್ನು ತಂದೊಡ್ಡಿದರಿಂದ ಮಕ್ಕಳಲ್ಲಿ ಮಾನಸಿಕ ಖಿನ್ನತೆ ಕಂಡುಬoದಿದೆ.

ಲಾಕ್‌ಡೌನ್ ಅವಧಿಯಲ್ಲಿ ಆನ್‌ಲೈನ್ ಶಿಕ್ಷಣ ಆರಂಭವಾದರೂ ಅನೇಕ ಮಕ್ಕಳಿಗೆ ಅದು ಸಂತಸ ನೀಡಿಲ್ಲ. ಆಟೋಟಗಳಲ್ಲಿ, ಸ್ನೇಹಿತರ ಜೊತೆಗೆ ನೆಮ್ಮದಿ ಕಾಣುತ್ತಿದ್ದ ಮಕ್ಕಳಿಗೆ ಓದು-ಬರಹದಿಂದ ದೂರವುಳಿದು, ಕೂಲಿ ಕಾರ್ಮಿಕರಾಗಿ ಬದಲಾಗಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವುದು ಗ್ರಾಮೀಣ ಪ್ರದೇಶಗಳಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ ಎಂದರು.

- Advertisement -

ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಪಿ. ಪರಸನ್ನವರ ಮಾತನಾಡಿ, ಒಂದುವರೆ ವರ್ಷದ ನಂತರ 6ನೇ ತರಗತಿಯ ನಂತರದ ಮಕ್ಕಳು ಶಾಲೆಯತ್ತ ಮುಖ ಮಾಡುತ್ತಿರುವುದರಿಂದ ಶಿಕ್ಷಕ ವೃಂದಕ್ಕೆ ಖುಷಿ ಸಂಗತಿಯಾದರೂ ಮಕ್ಕಳನ್ನು ಮೊದಲಿನಂತೆ ಶಿಕ್ಷಣದಲ್ಲಿ ತೊಡಗಿಸುವುದರಲ್ಲಿ ಶಿಕ್ಷಕರ ಪಾತ್ರ ಬಹಳವಾಗಿದೆ ಎಂದರು.

ಶಾಲೆಯನ್ನು ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸಿ, ಶಾಲೆಯನ್ನು ತಳಿರು ತೋರಣದಿಂದ ಶೃಂಗರಿಸಿ, ವಿದ್ಯಾರ್ಥಿನಿಯರಿಗೆ ಶಾಲಾ ಶಿಕ್ಷಕಿಯರಿಂದ ಆರತಿ ಮಾಡುವ ಮೂಲಕ ವಿದ್ಯಾರ್ಥಿನಿಯರನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಹೆಣ್ಣುಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯ ಬಿ.ಎಚ್. ಹುಲ್ಯಾಳ. ಪತ್ರಕರ್ತ ಭೀಮಶಿ ತಳವಾರ, ಶಿಕ್ಷಕಿಯರಾದ ಡಿ.ಎ.ಹದ್ಲಿ, ವ್ಹಿ.ಎಸ್. ಹಳಸಿ, ಆರ್.ಎ. ದೊಡಮನಿ, ಎಸ್.ಎಸ್. ಕಮ್ಮಾರ, ಎಸ್.ಬಿ. ಜಕಾತಿ ಹಾಗೂ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ...
- Advertisement -

More Articles Like This

- Advertisement -
close
error: Content is protected !!