ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ

0
364

ಮೈಸೂರು -ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಆರ್‍ಪಿ ದಕ್ಷಿಣ ವಲಯ ಮೈಸೂರು ಡಾಕ್ಟರ್ ಬಿ.ಸಿ.ವಿಜಯಕುಮಾರ್ ಬಲ್ಲೇನಹಳ್ಳಿ ಅವರುಧ್ವಜವಂದನೆ ಸ್ವೀಕರಿಸಿ, ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಕಾಂತಿ ನಾಯಕ್, ಮುಖ್ಯೋಪಾಧ್ಯಾಯ ಮೊಹಮ್ಮದ್ ಫಾರೂಕ್, ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ನೃತ್ಯ ಹಾಗೂ ಗೀತೆಗಳನ್ನು ಪ್ರಸ್ತುತಪಡಿಸಲಾಯಿತು.