ಶ್ರೀ ಕೃಷ್ಣ ಸಮೂಹ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮ

Must Read

ಶ್ರೀ ಕೃಷ್ಣ ಸಮೂಹ ವಿದ್ಯಾಸಂಸ್ಥೆಯ ಆವರಣದಲ್ಲಿ 77ನೇ ಗಣರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮೇಲ್ಮನವಿ ನ್ಯಾಯಪೀಠದ ಸದಸ್ಯರು ಹಾಗೂ ಗೌರವಾನ್ವಿತ ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ವಿದ್ಯಾ ಕೆ. ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ವೇಣುಗೋಪಾಲ, ಪ್ರಾಂಶುಪಾಲರಾದ ಡಾ. ಕಮಲಾ ಸುಗಂಧಿ, ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಮನೋಹರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಉಷಾಕುಮಾರಿ, ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ, ಪಿಯುಸಿ ವಿಭಾಗದ ಪ್ರಾಂಶುಪಾಲರಾದ ಶ್ರೀನಿವಾಸ ರೆಡ್ಡಿ, ವಿಜ್ಞಾನ ವಿಭಾಗದ ಪ್ರಾಂಶುಪಾಲರಾದ ಮಂಜುನಾಥ, ಶಾಲಾ ವಿಭಾಗದ ನಿರ್ದೇಶಕಿ ಶಾಂತಲಾ, ಐಸಿಐಸಿಇ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಪದ್ಮ ನವನೀತ, ಶಿಕ್ಷಕರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಶ್ರೀಮತಿ ವಿದ್ಯಾ ಕೆ. ರವರು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿ ಭಾರತದ ಸಂವಿಧಾನದ ಪೀಠಿಕೆಯನ್ನು ವಿವರಿಸಿದರು. ನಮ್ಮ ಸಂವಿಧಾನವು ವಿಶ್ವದಲ್ಲೇ ಶ್ರೇಷ್ಠವಾದದ್ದಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಅದರ ಮೌಲ್ಯಗಳನ್ನು ಅರಿತು, ವೈವಿಧ್ಯತೆಯಲ್ಲಿ ಏಕತೆಯ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ದೇಶದ ಸಾರ್ವಭೌಮತೆ, ಸಮಾನತೆ ಹಾಗೂ ಮೂಲಭೂತ ಹಕ್ಕುಗಳನ್ನು ಗೌರವಿಸಿ ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ಅವರು ಹೇಳಿದರು.

ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು ಮಾತನಾಡುತ್ತಾ, ಡಾ. ಬಿ.ಆರ್. ಅಂಬೇಡ್ಕರ್ ರವರು ರಚಿಸಿದ ಸಂವಿಧಾನವು ನಮ್ಮ ರಾಷ್ಟ್ರದ ಹೆಮ್ಮೆ ಎಂದರು. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ನ್ಯಾಯಾಧೀಶರು,  ಅಧಿಕಾರಿಗಳು ಆಗಿ ದೇಶ ಸೇವೆ ಮಾಡಬೇಕು. ತಂದೆ-ತಾಯಿಗಳು ಹಾಗೂ ರಾಷ್ಟ್ರವನ್ನು ಪ್ರೀತಿ ಮತ್ತು ಗೌರವದಿಂದ ಕಾಣಬೇಕು ಎಂದು ಅವರು ಸಲಹೆ ನೀಡಿದರು. ಕಾರ್ಯಕ್ರಮವು ದೇಶಭಕ್ತಿಗೀತಗಳು ಹಾಗೂ ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಅರ್ಥಪೂರ್ಣವಾಗಿ ನೆರವೇರಿತು.

LEAVE A REPLY

Please enter your comment!
Please enter your name here

Latest News

ಗಾಣಕುಲ ಸಿಂಚನ ಕೃತಿ ಲೋಕಾರ್ಪಣೆ

ಸವದತ್ತಿ : ದಿ. 01-02-2026 ರ ಭಾನುವಾರದಂದು ಬೆಳಿಗ್ಗೆ 10 - 00 ಗಂಟೆಗೆ ಸವದತ್ತಿಯಲ್ಲಿರುವ ಜ್ಯೋತಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ. ಸಭಾಂಗಣದಲ್ಲಿ...

More Articles Like This

error: Content is protected !!
Join WhatsApp Group