ಶಿವಲಿಂಗ ಟಿರಕಿಯವರಿಗೆ ಸತ್ಕಾರ

Must Read

ಮೂಡಲಗಿ – ಬಡ ನೇಕಾರರು ಸಾಲ ಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಸರ್ಕಾರ ನೇಕಾರರ ನೆರವಿಗೆ ಬರಬೇಕು. ನೇಕಾರರಿಗಾಗಿ ವಿಶೇಷ ಪ್ಯಾಕೇಜ್, ವಿಮಾ ಯೋಜನೆ, ಮಾಸಾಶನಗಳನ್ನು ಮಂಜೂರು ಮಾಡಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಹೇಳಿದರು.

ಮೂಡಲಗಿ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಶ್ರೀ ನೀಲಕಂಠಮಠದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.‌ನೇಕಾರರ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ನಾವು ಎಲ್ಲಾ ಕಡೆಗೆ ಮನವಿಗಳನ್ನು ನೀಡುತ್ತಿದ್ದೇವೆ ಎಂದು ಅವರು ಹೇಳಿದರು.

ನೀಲಕಂಠ ಮಠದ ಶ್ರೀ ಶಿವಾನಂದ ಸ್ವಾಮೀಜಿಯವರು ಟಿರಕಿಯವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ ಈಶ್ವರ ಮುರಗೋಡ, ಸೋಮು ಮರೇಗುದ್ದಿ, ಬಿಜೆಪಿ ನೇಕಾರ ಪ್ರಕೋಷ್ಠ ಸಂಚಾಲಕ ಮಹಾಲಿಂಗ ಒಂಟಗೋಡಿ, ಕುಮಾರ ಗಿರಡ್ಡಿ, ಮಡಿವಾಳ ಜಿಡ್ಡಿ, ಬಿಜೆಪಿ ಮುಖಂಡ ಪ್ರಕಾಶ ಮಾದರ, ಶ್ರೀಶೈಲ ಖಾನಾಪೂರ ಇತರರು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group