ಸಿಂದಗಿ ಪಟ್ಟಣದಲ್ಲಿ ಲಸಿಕಾ ಅಭಿಯಾನ

Must Read

ಸಿಂದಗಿ: ಸರ್ಕಾರದ ಆದೇಶದಂತೆ ಹಾಗೂ ವಿಶ್ವವಿದ್ಯಾಲಯದ ಆದೇಶದನ್ವಯ ಮುಂದಿನ ದಿನಮಾನಗಳಲ್ಲಿ ಕೋವಿಡ್ ಹರಡದಂತೆ ಹಾಗೂ ಶೈಕ್ಷಣಿಕ ದೃಷ್ಟಿಕೋನದಿಂದ, ಮುಂಬರುವ ಪರೀಕ್ಷೆಗಳನ್ನು ಎದುರಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಲಸಿಕಾ ಅಭಿಯಾನ ಅತ್ಯಗತ್ಯ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ ಪಿ ಕರ್ಜಗಿ ಹೇಳಿದರು.

ಪಟ್ಟಣದ ಪಿ ಇ ಎಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರೇಮಾ ಭೀ ಕರ್ಜಗಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಹಾಗೂ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಂದಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಕೋವಿಡ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮಹಾವಿದ್ಯಾಲಯದ ಪ್ರತಿಶತ 90 ವಿದ್ಯಾರ್ಥಿನಿಯರಿಗೆ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರಿಗು ಲಸಿಕೆ ಹಾಕಲಾಗಿದೆ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಆಯ್ ಬಿ ಬಿರಾದಾರ, ಎಸ್ ವಾಯ್ ಬಿಳಗಿ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್.ಕಡಣಿ, ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಬಿ.ಗೋಡ್ಕರ, ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಕುಲಕರ್ಣಿ, ಉಪನ್ಯಾಸಕ ಎಚ್.ಎಸ್. ಬಿರಾದಾರ, ವಿ.ವಿ.ಪಾಟೀಲ, ಬಿ.ಆರ್.ಬಿರಾದಾರ, ಎಸ್ ಎಸ್ ಮಗಿ, ಗುರುರಾಜ ಮಿರಗಿ ಸೇರಿದಂತೆ ಅನೇಕರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group