ಎಸ್ಎಸ್ ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ

Must Read

ಸವದತ್ತಿ: ವಿಧಾನ ಸಭಾ ಉಪಾಧ್ಯಕ್ಷ ಹಾಗೂ ಶಾಸಕ ಆನಂದ ಚಂ.ಮಾಮನಿ ಇವರ ಅಧ್ಯಕ್ಷತೆಯಲ್ಲಿ ಇಂದು ಮದ್ಯಾಹ್ನ 03.00 ಗಂಟೆಗೆ ತಾಲೂಕ ಪಂಚಾಯತ ಕಾರ್ಯಾಲಯದ ಸಭಾ ಭವನದಲ್ಲಿ ದಿ. 19 ಮತ್ತು 22 ಜುಲೈ 2021 ರಂದು ಜರುಗಲಿರುವ S.S.L.C ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತಂತೆ ಚರ್ಚಿಸಲು ಸಭೆ ಕರೆಯಲಾಗಿದ್ದು ಸದರ ಸಭೆಗೆ ತಹಶೀಲ್ದಾರ್ ಸವದತ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು, ಪೋಲಿಸ್ ಇಲಾಖೆಯ ಸಿ. ಪಿ. ಐ, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಸವದತ್ತಿ ಪುರಸಭೆ,ಮುನವಳ್ಳಿ ಪುರಸಭೆ ಹಾಗೂ ಯರಗಟ್ಟಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ಮತ್ತು ತಾಲೂಕಿನ ಎಲ್ಲ 27 ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಎಲ್ಲ ಪತ್ರಿಕಾ ಮಾದ್ಯಮದವರು ಎಲ್ಲರೂ ಹಾಜರಿರುವರು.

ಪರೀಕ್ಷಾ ಕಾರ್ಯ, ಮಕ್ಕಳ ಸುರಕ್ಷತೆ ಕುರಿತು ಸಭೆಯಲ್ಲಿ ಜರ್ಚಿಸಲಾಗುವುದು ಎಂದು ತಹಶೀಲ್ದಾರ್ ಸವದತ್ತಿ ಪ್ರಕಟಣೆಯಲ್ಲಿ ತಿಳಿಸಿರುವರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group