ಬೀದರ್ ನಲ್ಲಿ ಮೂರು ಕಡೆ ಎಸಿಬಿ ದಾಳಿ…

Must Read

ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ಬೆಳಂಬೆಳಗ್ಗೆ ಎಸಿಬಿ ಪೊಲೀಸರಿಂದ ಏಕ‌ ಕಾಲದಲ್ಲಿ ಮೂರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಬೀದರ್ ಜಿಲ್ಲೆಯ ಬಸವ ಕಲ್ಯಾಣದ ಶಿವಾಜಿ ನಗರದ ನಿವಾಸ ಪ್ರದೇಶಗಳನ್ನು, ಭಾಲ್ಕಿ ತಾಲೂಕಿನ ಮೇಹಕರ್ ನ ನಿವಾಸ ಹಾಗೂ ಮೇಹಕರ್ ಗ್ರಾಮದ ಪೆಟ್ರೋಲ್ ಪಂಪ್ ಸೇರಿದಂತೆ ಏಕ ಕಾಲಕ್ಕೆ ಮೂರು ಕಡೆ ಎಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಜಿಲ್ಲಾ ಪಂಚಾಯತ್ ಬಸವಕಲ್ಯಾಣ ವಿಭಾಗದಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕಿರಿಯ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್ ಮೋರೆ ನಿವಾಸದ ಮೇಲೆ ದಾಳಿಯಾಗಿದೆ.

ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬೀದರ್ ಎಸಿಬಿ ಪೊಲೀಸರು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ… ಎಸಿಬಿ ಎಸ್ಪಿ ಮಹೇಶ್ ಮಘಣ್ಣನವರ್ ಮಾರ್ಗದರ್ಶನದಲ್ಲಿ ಈ ದಾಳಿ ಮಾಡಲಾಗಿದೆ.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group