ನಲಿಕಲಿ ಸಾಹಿತ್ಯ ರಚನಾ ಸಮಿತಿಯ ಸದಸ್ಯರಾಗಿ ತಿಪ್ಪಾನಾಯ್ಕ ಆಯ್ಕೆ

Must Read

ಸವದತ್ತಿ: ತಾಲೂಕಿನ ಜನತಾ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕರಾದ ತಿಪ್ಪಾನಾಯ್ಕ ಎಲ್ ಇವರನ್ನು ನಲಿಕಲಿ ಸೇತುಬಂಧ ಅಭ್ಯಾಸ ಪುಸ್ತಕದ ಸಾಹಿತ್ಯ ರಚನಾ ಸಮಿತಿಯ ಸದಸ್ಯರನ್ನಾಗಿ ಸಮಗ್ರ ಶಿಕ್ಷಣ ಕರ್ನಾಟಕ ಡಿ ಎಸ್ ಇ ಆರ್ ಟಿ ಬೆಂಗಳೂರು ಇವರು ಆಯ್ಕೆ ಮಾಡಲಾಗಿದೆ.

ಸದರಿ ಶಿಕ್ಷಕರು ರಾಜ್ಯಮಟ್ಟದ ವಿವಿಧ ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದು, ವಿಜ್ಞಾನ ವಿಚಾರ ಗೋಷ್ಠಿ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಆಂಗ್ಲ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ ತರಬೇತಿಯ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಗುರು ಪ್ರೇರಣಾ ತರಬೇತಿಯ ಸಾಹಿತ್ಯ ರಚನಾ ಸಮಿತಿಯ ಸದಸ್ಯರಾಗಿ ಎನ್ ಸಿ ಇ ಆರ್ ಟಿ ಪಠ್ಯಪುಸ್ತಕ ಪರಿಚಯ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರ ಈ ಬಹುಮುಖ ಸೇವೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಂ.ಬಿ.ಬಳಿಗಾರ್ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಸಿ. ವಾಯ್. ತುಬಾಕಿ ಅಭಿನಂದಿಸಿದ್ದಾರೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group