ಹೆದರದೇ ಪರೀಕ್ಷೆ ಎದುರಿಸಿ – ಈರಣ್ಣ ಕಡಾಡಿ

Must Read

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ ಮಾಡಿ ಎಂದು ಹೇಳಿರುವುದರಿಂದ ಪರೀಕ್ಷೆಯನ್ನು ಹೆದರದೇ ಎದುರಿಸಬೇಕು, ಕೋವಿಡ್ ಬಗ್ಗೆ ಹೆದರದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪರೀಕ್ಷೆ ಬರೆಯಿರಿ, ಶೈಕ್ಷಣಿಕವಾಗಿ ಎತ್ತರಕ್ಕೆ ಬೆಳೆಯಿರಿ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾರೈಸಿದರು.

ಶನಿವಾರ ಜುಲೈ 17 ರಂದು ಕಲ್ಲೋಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಮಾತನಾಡಿದ ಈರಣ್ಣ ಕಡಾಡಿ ಅವರು, ಈ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗ, ಅಧಿಕಾರಿಗಳು ಹಾಗೂ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸುರಕ್ಷಿತ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಹಾಗೂ ಪರೀಕ್ಷೆ ಎದುರಿಸುತ್ತಿರುವ ಎಲ್ಲ ಮಕ್ಕಳಿಗೆ ಶುಭ ಕೋರುತ್ತಾ ಸುರಕ್ಷಿತ ಹಾಗೂ ಯಶಸ್ವಿ ಪರೀಕ್ಷೆಗೆ ಶುಭ ಹಾರೈಸುತ್ತೇನೆ ಎಂದರು.

ಪ್ರಾಂಶುಪಾಲರಾದ ಕೆ.ಬಿ. ಗಂಗರೆಡ್ಡಿ, ರಮೇಶ ಎಮ್ಮಿ, ಶ್ರೀಶೈಲ ತುಪ್ಪದ, ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group