“ಕೋರೋನಾ ಶಾಂತನಾಗು” ವಿಶೇಷ ಜಾಗೃತಿ ಕಾರ್ಯಕ್ರಮ

Must Read

ಬೆಳಗಾವಿ – ಬೆಳಗಾವಿಯ ಸ್ವಯಂ ಸೇವಾ ಸಂಘದ ವತಿಯಿಂದ ಚನ್ನಬಸಯ್ಯ ಕಟಪುರ ಮಠ ಮತ್ತು ಇತರ ಸಮಾಜ ಸೇವಾ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಭೇಟಿಯಾಗಿ ಸಂಭಾವ್ಯ ಕರೋನಾ ರೋಗದ ಮೂರನೇ ಅಲೆಯ ಕುರಿತು ಎಚ್ಚರಿಕೆ ಮತ್ತು ಜಾಗರೂಕತೆ ವಹಿಸಿಕೊಳ್ಳಲು ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಈಗಿನಿಂದಲೇ ಕಠಿಣ ಕ್ರಮಗಳನ್ನು ಅನುಸರಿಸಲು ಜಾಗೃತಿ ಮೂಡಿಸಬೇಕಾಗಿದೆ ಎಂದು ಮನವಿ ಮಾಡಿಕೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸಹ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ನೂತನವಾಗಿ ಬೆಳಗಾವಿಯ ಉಪವಿಭಾಗಾಧಿಕಾರಿಗಳಾಗಿ ಅಧಿಕಾರವಹಿಸಿಕೊಂಡ ಶ್ರೀಧರ್ ಕರಲಿಂಗನ್ನವರ ಅವರನ್ನು ಶುಭಾಶಯ ಕೋರಿ ಸನ್ಮಾನಿಸುವ ದರ ಮೂಲಕ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ವಿಜಯಾ ಹಿರೇಮಠ್, ರೇಷ್ಮಾ ಕಿತ್ತೂರ, ಚನ್ನಬಸಯ್ಯ ಕಟಾಪುರಿಮಠ ಸೇರಿದಂತೆ ಇತರ ಸಾಮಾಜಿಕ ಸೇವಾ ಕಾರ್ಯಕರ್ತರು ಹಾಜರಿದ್ದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group