ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತ

Must Read

ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತೀಚೆಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿಯಾಗಿ ದೆಹಲಿ ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭವಾಗಬೇಕು ಎಂಬುವುದರ ಬಗ್ಗೆ ಮನವಿ ಮಾಡಲಾಗಿತ್ತು. ನನ್ನ ಮನವಿಯನ್ನು ಪರಿಗಣಿಸಿ, ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭಿಸಿದ್ದು ಸ್ವಾಗತಾರ್ಹ ಕ್ರಮ ಎಂದು ಹರ್ಷ ವ್ಯಕ್ತಪಡಿಸಿದ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಅಭಿನಂದಿಸುತ್ತೇನೆ ಎಂದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group