ಹಾವೇರಿ ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹ

Must Read

ಬೆಳಗಾವಿ : ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಹಾವೇರಿ ಶಾಸಕ ನೆಹರು ಓಲೇಕಾರ ಅವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ಛಲವಾದಿ ಮಹಾಸಭಾ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಅಖಂಡ ಭಾರತಕ್ಕೆ ಸಂವಿಧಾನವನ್ನು ಕೊಟ್ಟಿರುವಂತಹ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯದವರಾಗಿರುವ ಮತ್ತು ಕರ್ನಾಟಕ ರಾಜ್ಯದಲ್ಲಿ ದಲಿತರ ಜನಸಂಖ್ಯೆಯಲ್ಲಿ 40 ಲಕ್ಷಕ್ಕಿಂತ ಅಧಿಕ ಛಲವಾದಿ ಸಮುದಾಯದವರು ಇದ್ದಾರೆ. ಆದರೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನವನ್ನು ಬಿಜೆಪಿ ಇಲ್ಲಿಯವರೆಗೂ ನೀಡಿಲ್ಲ. ಸಮಾಜದ ಅಭಿವೃದ್ಧಿಗೊಸ್ಕರ ಪಕ್ಷದ ಹಿತದೃಷ್ಟಿಯಿಂದ ನಮ್ಮ ಸಮಾಜದ ಮುಖಂಡರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಾರಾಯಣ ಛಲವಾದಿ, ಮೋಹನ ಕಂಗ್ರಾಳಕರ, ಕೃಷ್ಣಾ ಕಾಂಬಳೆ, ಪರಶುರಾಮ ಕಾಂಬಳೆ, ದೀಪಕ ಮೇತ್ರಿ, ಮಾಂತೇಶ ಬಾಂದೇಶಕರ, ದುರ್ಗೇಶ್ ಮೇತ್ರಿ ಸೇರಿದಂತೆ ಬೆಳಗಾವಿ ಛಲವಾದಿ ಮಹಾಸಭಾ ಸಂಘದ ಸದಸ್ಯರು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group