ಗಡಿ ಪ್ರದೇಶ ಅಭಿವೃದ್ಧಿಗೆ ಕಟ್ಟಿ ಬದ್ಧ ಪ್ರಾಧಿಕಾರ

Must Read

ಬೆಳಗಾವಿ: ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕನ್ನಡ ಪರ ಸಂಘಟನೆಗಳ ಸಮಾಲೋಚನೆ ಸಭೆ  ಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಪ್ರಾಧಿಕಾರ ದ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಯಳ್ಳೂರ ಭಾಗದಲ್ಲಿ ಬೆಳಗಾವಿಗೆ ಸುಸ್ವಾಗತ ಕಮಾನ ನಿರ್ಮಾಣ ಮತ್ತು  ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರು ಸಹಕಾರ ನೀಡಬೇಕು ಎಂದರು.  ಗಡಿಭಾಗದಲ್ಲಿ ಕನ್ನಡ ಹೋರಾಟ ಗಾರರ ಕಿರುಚಿತ್ರ ನಿರ್ಮಾಣ ಹಾಗೂ  ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.

ದಾರ್ಶನಿಕರ ಕುರಿತು ವಿಚಾರ ಸಂಕಿರಣ ಆಯೋಜನೆ. ಶಿಕ್ಷಣ ಸಂಸ್ಕೃತಿ ಸಾಹಿತ್ಯ ಬಗೆಗಿನ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಗಡಿ ಪ್ರದೇಶದ ತಾಲ್ಲೂಕಿನಲ್ಲಿ  ವಿವಿಧ ಇಲಾಖೆಗಳ ಪ್ರಗತಿ  ಬಗ್ಗೆ ಪ್ರತಿ 3 ತಿಂಗಳಿಗೊಮ್ಮೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಹಾಗೂ ಗಡಿ ಪ್ರದೇಶದ ಕಾಲೇಜುಗಳಿಗೆ ಅತಿಥಿ ಕನ್ನಡ  ಉಪನ್ಯಾಸಕರ ನೇಮಕಕ್ಕೆ ಕ್ರಮ ಕೈಗೊಳ್ಳುವುದು ಎಂದರು. ಗಡಿ ಭಾಗದ ಹಳ್ಳಿ ಯಲ್ಲಿ ಒಳ್ಳೆಯ ಸಾಂಸ್ಕೃತಿಕ ಚಿತ್ರಗಳ ಪ್ರದರ್ಶನಕ್ಕೆ ಕ್ರಮ ಕೈಗೊಳ್ಳಲಾಗುವುದು.

ಕರ್ನಾಟಕ ಗಡಿ ಪ್ರದೇಶ  ಅಭಿವೃದ್ಧಿ ಪ್ರಾಧಿಕಾರ ಕ್ಕೆ 15 ಕೋಟಿ ಅನುದಾನ ಮಂಜೂರು ಆಗಿದೆ ಎಂದು ಮಾಹಿತಿ ನೀಡಿದರು. ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಶಾವತಿ ಭಂಜ್ರತಿ, ಕಸಾಪ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಸಾಹಿತಿ ಡಾ.ಸರಜೂ ಕಾಟ್ಕರ್, ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ,  ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಶ್ರೀನಿವಾಸ ತಾಳೂಕರ, ಎಂ ವೈ ಮೆಣಸಿನಕಾಯಿ, ಸೋಮಶೇಖರ ಹಲಸಗಿ, ಅನಂತಕುಮಾರ ಬ್ಯಾಕೂಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group