ಬಿಜೆಪಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ – ರಮೇಶ ಭೂಸನೂರ

Must Read

ಸಿಂದಗಿ – ನಗರದಲ್ಲಿ ಭಾರತೀಯ ಜನತಾ ಪಕ್ಷ ಸಿಂದಗಿ ಮಂಡಲ ಮಹಿಳಾ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ರವರು ಭಾಗವಹಿಸಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೂ ಕೂಡ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ.ಹಾಗೆಯೇ ಕೇಂದ್ರ ,ರಾಜ್ಯ ಸರ್ಕಾರದ ಮಹಿಳೆಯರಿಗಾಗಿ,ಹೆಣ್ಣು ಮಕ್ಕಳಿಗೆ ಇರುವ ವಿಶೇಷ ಯೋಜನೆಗಳನ್ನು ಪ್ರತಿ ಮನೆಗೆ ಮನೆಗೆ ತಲುಪಿಸುವ ಕಾರ್ಯ ಕೈಗೊಳ್ಳೋಣ ಎಂದು ತಿಳಿಸಿದರು.

ಮುಂಬರುವ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನ ಸಭೆ,ವಿಧಾನ ಪರಿಷತ್ ಚುನಾವಣೆಗಳಿಗೆ ಸಜ್ಜಾಗಲು ಮಹಿಳಾ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಹಾಗೂ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ್ ಅಲ್ಲಾಪೂರ ಮಾತನಾಡಿದರು ಹಾಗೂ ಮಹಿಳಾ ಮೋರ್ಚಾ ಅಧ್ಯಕ್ಷ ಸುನಂದಾ ಯಂಪೂರೆ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷ ಶಿಲ್ಫಾ ಕುದರಗೊಂಡ,ಭಾರತಿ ಭೂಯಾರ ಗಾಯತ್ರಿ ದೇವೂರ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ ಮಲ್ಲಮ್ಮ ಪಾಟೀಲ, ಅನಸುಯಾ ಪಾರಗೊಂಡ , ಶಾರದಾ ಮಂಗಳೂರು, ಸಂಗೀತಾ ತೀಕೋಟಿ , ಮಂಗಲಾ ಗುಡಿಮಠ, ಗಂಗುಬಾಯಿ ಅಮ್ಮಲಜರಿ , ಸುನಂದಾ ಭಜಂತ್ರಿ ಹಾಗೂ ಜಿಲ್ಲಾ ಮಹಿಳಾ ಪದಾಧಿಕಾರಿಗಳು ತಾಲ್ಲೂಕಿನ ಎಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರು ಹಾಗೂ ಸದಸ್ಯರು, ಎಲ್ಲಾ ಬಿಜೆಪಿ ಮೋರ್ಚಾ ಅಧ್ಯಕ್ಷರು ಹಾಗೂ ಸದಸ್ಯರು ಕೆಡಿಪಿ ಸದಸ್ಯರು, ಕಾರ್ಯಕರ್ತರು ಅತೀ ಉತ್ಸಾಹದಿಂದ ಭಾಗವಹಿಸಿ ಕಾರ್ಯಕಾರಿಣಿ ಸಭೆ ಯಶಸ್ವಿಗೊಳಿಸಿದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group