ಮೀರಜ್ – ಮಂಗಳೂರು ರೈಲು ಓಡಾಟ ಶೀಘ್ರ ಆರಂಭಿಸಲು ಕಡಾಡಿಯವರಿಂದ ಮನವಿ

Must Read

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಮೀರಜ್-ಮಂಗಳೂರ ವಾಯಾ ಅರಸೀಕೆರೆ ಮಾರ್ಗವಾಗಿ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.

ಬುಧವಾರ (ಆ.4) ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಈ ಭಾಗದ ಸಾರ್ವಜನಿಕರ ಪರವಾಗಿ ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿ, ಬೆಳಗಾವಿ-ಬೆಂಗಳೂರು ಸೂಪರ ಫಾಸ್ಟ್ ರೈಲು ಸಂಚಾರವನ್ನು ಮೈಸೂರವರೆಗೆ ವಿಸ್ತರಿಸಬೇಕು, ಮೀರಜ್- ಬೆಳಗಾವಿ-ಮಡಗಾಂವ್ (ಗೋವಾ ರಾಜ್ಯ) ದಿಂದ ಹೊಸ ರೈಲು ಸೇವೆ ಆರಂಭಿಸಬೇಕು. ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲ್ವೆ ಮಾರ್ಗದ ತ್ವರಿತ ಅನುಷ್ಠಾನದ ಅಗತ್ಯತೆ ಇದೆ ಎಂದು ಹೇಳಿದರು.

ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಿಭಾಗದ ಭೌಗೊಳಿಕ ವ್ಯಾಪ್ತಿಯು ವಿಜಯನಗರದವರೆಗೆ ಮಾತ್ರ ಇದ್ದು, ಅದನ್ನು ಮಿರಜ್‍ವರೆಗೆ ವಿಸ್ತರಿಸಬೇಕು. ಕೋವಿಡ್ 19 ಕಾರಣದಿಂದ ಕೆಲವು ರೈಲುಗಳ ಓಡಾಟ ನಿಲ್ಲಿಸಲಾಗಿದ್ದು, ಅವುಗಳನ್ನು ಮರಳಿ ಪ್ರಾರಂಭಿಸುವ ಮೂಲಕ ಉತ್ತರ ಕರ್ನಾಟಕದ ಜನರ ಬೇಡಿಕೆಗೆ ಸ್ಪಂದಿಸಬೇಕೆಂದರು. ಮಹಾನಗರ ಬೆಂಗಳೂರು ಬಿಟ್ಟು, ಅತಿ ಹೆಚ್ಚು ಜನರ ಸಂಪರ್ಕ ಸೇತುವೆಯಂತಿದ್ದ ಬೆಳಗಾವಿಗೆ ರೈಲ್ವೆ ಸೌಲಭ್ಯಕ್ಕೆ ವಿಶೇಷ ಗಮನ ನೀಡಬೇಕೆಂದು ಮನವಿ ಮಾಡಿಕೊಂಡರು.

ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ, ಕೇಂದ್ರ ರೈಲ್ವೆ ರಾಜ್ಯ ಸಚಿವ ರಾವಸಾಹೇಬ ದಾನ್ವೆ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನಕುಮಾರ ಕಟೀಲ ಸೇರಿದಂತೆ ರಾಜ್ಯದ ಸಂಸದರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group