ಬೆಳಗಾವಿಯ ಸುವರ್ಣ ಸೌಧಕ್ಕೆ ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

Must Read

“ಬೆಳಗಾವಿಯ ಸುವರ್ಣ ಸೌಧಕ್ಕೆ‌ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ.‌ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ತೀರ್ಮಾನಿಸಿದ್ದೇನೆ” ಇಂದು ರವಿವಾರ ಸಂಜೆ ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ತಮ್ಮನ್ನು ಭೆಟ್ಟಿಯಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಭರವಸೆ ನೀಡಿದ್ದಾರೆ.

ಗಡಿ ಅಭಿವೃದ್ಧಿ ಪ್ರಾಧಿಕಾರ,ಗಡಿ ಸಂರಕ್ಷಣಾ ಆಯೋಗ,ಸುವರ್ಣ ಸೌಧಕ್ಕೆ ಪ್ರಮುಖ ಕಚೇರಿಗಳ ಸ್ಥಳಾಂತರ ಹಾಗೂ ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡುವ ಕುರಿತು ನಿಯೋಗವು ಬೊಮ್ಮಾಯಿ ಅವರೊಂದಿಗೆ ಚರ್ಚಿಸಿತು.

2006 ರ ಫೆಬ್ರುವರಿ 16 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ 2014 ರ ಅಕ್ಟೋಬರ 14 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದಲ್ಲಿ ನಾಡು,ನುಡಿ ಹಾಗೂ ಗಡಿಗೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರ,ಚಿಂತಕರ ಸಭೆ ಕರೆದಿದ್ದರು. ತಾವೂ ಸಹ ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂಥ ಸಭೆಯನ್ನು ಕರೆಯಬೇಕೆಂದು ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಬೊಮ್ಮಾಯಿ ಅವರನ್ನು ಆಗ್ರಹಿಸಿದರು.‌

ಮುಂದಿನ ಅಕ್ಟೋಬರ 23ರ‌ ಕಿತ್ತೂರು ಚೆನ್ನಮ್ಮ ರಾಣಿಯ ವಿಜಯೋತ್ಸವದ ಮುನ್ನವೇ ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕೆಂದು ಅಶೋಕ ಚಂದರಗಿ ಮನವಿ ಮಾಡಿದರು.

ನಿಯೋಗದಲ್ಲಿ ಮೈನೋದ್ದೀನ್ ಮಕಾನದಾರ,ಶಿವಪ್ಪ ಶಮರಂತ,ಹರೀಶ ‌ಕರಿಗೊನ್ನವರ,ವಿರೇಂದ್ರ ಗೋಬರಿ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group