ಬಿಜೆಪಿ ಸಮಾರಂಭದಲ್ಲಿ ಕೋವಿಡ್ ನಿಯಮ ಉಲ್ಲಂಘನೆ

Must Read

ಬೀದರ: ಯಾವುದೇ ಕಾರ್ಯಕ್ರಮಗಳಲ್ಲಿ ಜನರು ಸೇರಬಾರದು, ಹೂ ಗುಚ್ಛಗಳನ್ನು ಕೊಡಬಾರದು ಎಂಬುದು ಮುಖ್ಯಮಂತ್ರಿಗಳ ಆದೇಶವಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೇಂದ್ರ ಸಚಿವ ಪ್ರಭು ಚವ್ಹಾಣ ಅವರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಅದ್ದೂರಿ ಕಾರ್ಯಕ್ರಮದಲ್ಲಿ ಭಾಗಿಯಾದರು.

ಔರಾದ ತಾಲೂಕಿನಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಗೆ ಸೇರ್ಪಡೆಯಾಗಿದ್ದು ಆ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಚಿವ ಪ್ರಭು ಚವ್ಹಾಣ ಸೇರಿದಂತೆ ಎಲ್ಲ ಕಾರ್ಯಕರ್ತರು ಕೋವಿಡ್ ಭಯವೇ ಇಲ್ಲದಂತೆ ಪಾಲ್ಗೊಂಡರು.

ಬೃಹತ್ ಶಾಮಿಯಾನ ಹಾಕಿದ್ದ ಸಮಾರಂಭದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಮೂರನೇ ಅಲೆಯ ಭಯವಿದ್ದರೂ ಯಾರೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ಭಾಗವಹಿಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು ಸ್ಪಷ್ಟವಾಗಿತ್ತು.

ಸಮಾರಂಭಕ್ಕೆ ಮೊದಲು ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಅತ್ಯಂತ ಸಂದಣಿಯಲ್ಲಿ ಪಾಲ್ಗೊಂಡು ಸಚಿವರಿಗೆ ಬೃಹತ್ ಪ್ರಕಾರ ಪ್ರಮಾಣದ ಹಾರ ಹಾಕಿ ಸ್ವಾಗತ ಮಾಡಿಕೊಂಡರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಮನಕ್ಕೆ ಮುದ ನೀಡಿದ ಕಾಮನಬಿಲ್ಲು

ಮೂಡಲಗಿ : ಕಾಮನಬಿಲ್ಲು ಕಮಾನು ಕಟ್ಟಿದೆ ಮೋಡದ ನಾಡಿನ ಬಾಗಿಲಿಗೆ !ಬಣ್ಣಗಳೇಳನು ತೋರಣ ಮಾಡಿದೆ ಕಂದನ ಕಣ್ಣಿಗೆ ಚೆಂದವನೂಡಿದೆ !ಎಂಬ ಕುವೆಂಪುರವರ ಕವಿತೆಯನ್ನು ನೆನಪಿಸುವಂತೆ ಮೂಡಲಗಿಯಲ್ಲಿ ಮೂಡಣದ ಆಗಸದಲ್ಲಿ ಸುಂದರವಾದ...

More Articles Like This

error: Content is protected !!
Join WhatsApp Group