Homeಸುದ್ದಿಗಳುಅಪರಿಚಿತ ಮಹಿಳೆಯ ಶವ ಪತ್ತೆ

ಅಪರಿಚಿತ ಮಹಿಳೆಯ ಶವ ಪತ್ತೆ

ಬೀದರ – ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಬೀದರ ಜಿಲ್ಲೆಯ ಬೇಮಳಖೆಡಾ ಪೋಲಿಸ್ ಠಾಣೆ ವ್ಯಾಪ್ತಿ ಯಲಿ ಮತ್ತೊಂದು ವಿಚಿತ್ರ ಪ್ರಕರಣ ವರದಿಯಾಗಿದೆ.

ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು ಅಂದಾಜು 21 ರಿಂದ 25 ವಯಸ್ಸಿನ ಯುವತಿಯ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರವೆಸಗಿ ಸುಟ್ಟು ದೇಹ ಬಿಸಾಡಿರುವ ಶಂಕೆಯಿದೆ.

ಈ ಪ್ರಕರಣ ಸಾಮಾಜಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಕೂಡ ಉಂಟಾಗಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

RELATED ARTICLES

Most Popular

error: Content is protected !!
Join WhatsApp Group