ದಿ.೫ ರಂದು ಶಿಕ್ಷಕರ ದಿನ ಆಚರಣೆ

Must Read

ಮೂಡಲಗಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸೆ.5 ರವಿವಾರದಂದು ಸ್ಥಳೀಯ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಮುಂಜಾನೆ 11-00 ಗಂಟೆಗೆ ಸರಕಾರ ಹಾಗೂ ಇಲಾಖೆಯ ಮಾರ್ಗದರ್ಶನದಂತೆ ಕೋವಿಡ್-19 ಶಿಷ್ಟಾಚಾರದ ನಿಯಮಾನುಸಾರ ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಶ್ರೀ ಶ್ರೀ ದತ್ತಾತ್ರೇಯಬೋಧ ಮಹಾಸ್ವಾಮೀಜಿ ವಹಿಸುವರು. ಉದ್ಘಾಟಕರಾಗಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಅಧ್ಯಕ್ಷತೆಯನ್ನು ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ, ವಿವೇಕರಾವ್ ಪಾಟೀಲ, ಅರುಣ ಶಹಪೂರ, ಹಣಮಂತ ನಿರಾಣಿ, ಡಿಡಿಪಿಐ ಗಜಾನನ ಮನ್ನಿಕೇರಿ, ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಕಾ ಹಾದಿಮನಿ, ತಹಶೀಲ್ದಾರ ಡಿ.ಜಿ ಮಹಾತ, ತಾಪಂ ಇಒ ಎಸ್.ಕೆ ಚೌಗಲೆ ಹಾಗೂ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರತಿಷ್ಠಾನಗಳ ಮುಖ್ಯಸ್ಥರು ಉಪಸ್ಥಿತರಿರುತ್ತಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group