ಸಿಂದಗಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕಸಿಂದಗಿ ಶಾಲಾ ಪ್ರಾರಂಬೋತ್ಸವಕ್ಕೆ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಆಗಮಿಸಿ ಮಕ್ಕಳಿಗೆ ಪಠ್ಯ ಪುಸ್ತಕ ನೋಟ್ ಪುಸ್ತಕ ಮತ್ತು ಲೇಖನಿ ನೀಡಿ ಸ್ವಾಗತಿಸಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.
ನಂತರ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಕಡ್ಡಾಯವಾಗಿ ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿಗೆ ಹಾಜರಾಗಿ ಶಿಕ್ಷಣ ಪಡೆಯಬೇಕೆಂದರು ಎಲ್ಲ ಮಕ್ಕಳು ಶಾಲೆಗೆ ಹಾಜರಾಗುವಂತೆ ಕ್ರಮ ವಹಿಸಿ ಮಕ್ಕಳಿಗೆ ಸರಕಾರ ನಿಗದಿಪಡಿಸಿದಂತೆ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳಲು ಶಿಕ್ಷಕರಿಗೆ ಸೂಚಿಸಿದರು ಪ್ರತಿಯೊಂದು ಮಗುವು ಕೃತಿಸಂಪುಟ ಸರಕಾರದ ನಿಯಮ ಪ್ರಕಾರ ನಿಖರ ಮತ್ತು ವಸ್ತುನಿಷ್ಠವಾದ ಮೌಲ್ಯಮಾಪನ ಹಾಗೂ ಚಟುವಟಿಕೆ ಆಧಾರಿತ ಶೈಕ್ಷಣಿಕ ಚಟುವಟಿಕೆಗಳು ಕೈಗೊಂಡು ದಾಖಲೆಗಳನ್ನು ನಿರ್ವಹಿಸಲು ಸೂಚಿಸಿದರು. ಮಕ್ಕಳೊಂದಿಗೆ ಸಂವಾದ ಮಾಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿ ಮಕ್ಕಳಿಗೆ ಕೊವಿಡ್ ನಿಯಮಗಳ ಬಗ್ಗೆ ತಿಳಿ ಹೇಳಿದರು ಇಲ್ಲಿವರೆಗೂ ನಡೆದ ಕಲಿಕೆ ಪ್ರಗತಿಯನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ಇಕೋ ಕ್ಲಬ್ ಹಾಗೂ ಕ್ರೀಡಾ ಕೊಠಡಿ ಉದ್ಘಾಟಿಸಲಾಯಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ್ ಭೂಸನೂರ ಮಕ್ಕಳಿಗೆ ಉಚಿತವಾಗಿ ಸ್ವಂತ ನೋಟ್ ಬುಕ್ ವಿತರಿಸಿದರು. ಶಾಲೆಯ ಮಾಜಿ ಎಸ್ ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ ಎಲ್ಲ ಮಕ್ಕಳಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯಾಯನಿ ವ್ಹಿ.ಎಮ್ ರಬಿನಾಳ ಸಮೂಹ ಸಂಪನ್ಮೂಲ ವ್ಯಕ್ತಿ ಬಿ.ಜಿ ಬಿರಾದಾರ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದೇವರ ಹಿಪ್ಪರಗಿ ತಾಲ್ಲೂಕು ಘಟಕದ ಅಧ್ಯಕ್ಷ ಎ ಎಚ್ ವಾಲಿಕಾರ ಮತ್ತು ಶಿಕ್ಷಕ ಎಮ್.ಕೆ.ಬಿರಾದಾರ ಶಾಲೆಯ ಎಲ್ಲಾ ಶಿಕ್ಷಕರು ಹಾಜರಿದ್ದರು .