ಸವದತ್ತಿ: ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷದುದ್ದಕ್ಕೂ ನಡೆದಿರುವ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಶನಿವಾರ 11-09-2021ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.
ಈ ಕಾಯಕ್ರಮದಲ್ಲಿ ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡ ವಿರುಪಾಕ್ಷಿ ಕ. ಮಾಮನಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜೊತೆಗೆ ಸದಸ್ಯರಾದ ಬಿ.ವಿ.ಮಲಗೌಡರ, ಉಮೇಶ ಬಾಳಿ, ಈಶಣ್ಣಾ ಜಕಾತಿಯವರು ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಪ್ರಾಚಾರ್ಯ ಪ್ರೊ. ಮಾರುತಿ ಎ. ದೊಂಬರ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ಅಗ್ರಶ್ರೇಯಾಂಕ ಪಡೆದ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಸತ್ಕಾರ ಮತ್ತು ಪ್ರಮಾಣಪತ್ರ ವಿತರಣೆ ಮಾಡಲಾಗುತ್ತದೆ.
ಹಳೆಯ ವಿದ್ಯಾರ್ಥಿ ಬಳಗವು ಮಹಾವಿದ್ಯಾಲಯದ ಎಲ್ಲ ಚಟುವಟಿಕೆಗಳಿಗೆ ನಿರಂತರ ಬೆನ್ನೆಲುಬಾಗಿ ನಿಂತಿದೆ. ಇವರ ಕೊಡುಗೆ ಶ್ಲಾಘನೀಯ. ಹೀಗಾಗಿ ಹಳೆಯ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಮಂಡಳಿ ಮತ್ತು ಸರ್ವ ಸದಸ್ಯರೆಲ್ಲರೂ, ಪಾಲಕರು, ಶಿಕ್ಷಣ ಪ್ರೇಮಿಗಳೂ ಉಪಸ್ಥಿತರಲಿದ್ದಾರೆ ಎಂದು ಪ್ರಾಚಾರ್ಯ ಮಾರುತಿ ಎ. ದೊಂಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.