ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

Must Read

ಬೀದರ್: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಇಂದು ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ…‌

ನಗರದ ಕುಂಬಾರವಾಡ ಬಡಾವಣೆಯ 46 ವರ್ಷದ ಧನರಾಜ ದಶರಥ ನಿನ್ನೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ನಗರದ ಅಂಬೇಡ್ಕರ್ ವೃತ್ತದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಪರಿಣಾಮ ಶೇ.50 ರಷ್ಟು ಮೈಸುಟ್ಟಿತ್ತು,ಸಾವು-ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬ್ರಿಮ್ಸ್ ನಲ್ಲಿ ಚಿಕಿತ್ಸೆ ಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬ್ರೀಮ್ಸ್ ನಲ್ಲಿ ಸಾವನ್ನಪ್ಪಿದ್ದು ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group