ಬ್ರಿಟೀಷರಿಗೆ ಸವಾಲು ಹಾಕಿದ ಧೀರ ಮಹಿಳೆ ಚೆನ್ನಮ್ಮ – ಕಡಾಡಿ

Must Read

ಮೂಡಲಗಿ: ಸೂರ್ಯ ಮುಳುಗದ ಬ್ರಿಟೀಷ್ ಸಾಮ್ರಾಜ್ಯಕ್ಕೆ ಸವಾಲು ಹಾಕಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚೆನ್ನಮ್ಮಗೆ ಸಲ್ಲುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಶನಿವಾರ ಅ. 23 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ವೀರ ಸೇನಾನಿ ರಾಣಿ ಕಿತ್ತೂರ ಚೆನ್ನಮ್ಮ ಅವರ 243ನೇ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕಿ ಎಂದು ಕರೆಸಿಕೊಳ್ಳುವ ಚೆನ್ನಮ್ಮ ಇಂದು ಸ್ತ್ರೀ ಕುಲಕ್ಕೆ ಮಾದರಿಯಾಗಿದ್ದಾರೆ ಎಂದರು.

ಈ ಹಿಂದೆ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಕಿತೂರು ಕೋಟೆ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ 200 ಕೋಟಿ ರೂ. ಬಿಡುಗಡೆ ಮಾಡಿದ್ದು, ಬರಲಿರುವ ದಿನಗಳಲ್ಲಿ ಚನ್ನಮ್ಮ ಆಳಿದ ಕಿತ್ತೂರು ಪ್ರದೇಶ ಒಂದು ಐತಿಹಾಸಿಕ ಪ್ರೇಕ್ಷಣಿಯ ಸ್ಥಳ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸೇವಾ ಸಂಸ್ಥೆಯ ಅಧ್ಯಕ್ಷ ಬಸವರಾಜ ಕಡಾಡಿ, ಸಹಕಾರಿಯ ಶಿವಪ್ಪ ವ್ಯಾಪಾರಿ, ಸಿದ್ದಣ್ಣ ಹೆಬ್ಬಾಳ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಂಜುಳಾ ಹಿರೇಮಠ, ಸುಗಂಧಾ ಗೊರಗುದ್ಧಿ, ಪಾರ್ವತಿ ಬಿ.ಪಾಟೀಲ ಈರಣ್ಣ ಮುನ್ನೊಳ್ಳಿಮಠ, ಮಹಾಂತೇಶ ಬಿ.ಪಾಟೀಲ ಸೇರಿದಂತೆ ಅನೇಕ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group