ಜಿಲ್ಲಾಧಿಕಾರಿಯಿಂದ ಚುನಾವಣಾ ತಯಾರಿ ಪರಿಶೀಲನೆ

Must Read

ಸಿಂದಗಿ: ಉಪಚುನಾವಣೆಗೆ ಸಂಬಂಧಿಸಿದಂತೆ ಸಿಂದಗಿ ಆರ್.ಡಿ ಪಾಟೀಲ ಕಾಲೇಜಿನ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಈ ಚುನಾವಣೆ ಅಂಗವಾಗಿ ಸುವ್ಯವಸ್ಥಿತವಾಗಿ ಮತದಾನ ಪ್ರಕ್ರಿಯೆ ನಡೆಸಲು ಸಕಲ ರೀತಿಯಿಂದ ಸಜ್ಜುಗೊಂಡಿದ್ದು, ನಿಯೋಜಿತಗೊಂಡಿರುವ  ಮತಗಟ್ಟೆ ಸಿಬ್ಬಂದಿಗಳಿಗೆ ಇಲ್ಲಿ ಕಲ್ಪಿಸಲಾದ ಊಟ, ಉಪಹಾರದ ವ್ಯವಸ್ಥೆ ಸೇರಿದಂತೆ ಇನ್ನಿತರ ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು.

ಸಿಬ್ಬಂದಿಗಳಿಗೆ ಕಲ್ಪಿಸಲಾದ ವ್ಯವಸ್ಥೆಗಳ ಮತ್ತು ಉಪಹಾರದ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಚುನಾವಣೆ ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಲು ಎಲ್ಲ ಸಿಬ್ಬಂದಿಗಳು ಸರ್ವಸನ್ನದ್ಧರಾಗಿದ್ದು, ಇಲ್ಲಿ ಕಲ್ಪಿಸಿದ ವ್ಯವಸ್ಥೆಗಳ ಬಗ್ಗೆ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ರಾಹುಲ್ ಸಿಂಧೆ ಹಾಗೂ ಇತರರು ಉಪಸ್ಥಿತರಿದ್ದರು.

ಮತಗಟ್ಟೆಗಳಿಗೆ ತೆರಳುವ ಸಿಬ್ಬಂದಿ; ಈ ಉಪ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ರಾಹುಲ್ ಸಿಂಧೆ ಅವರು ಕ್ಷೇತ್ರದ 297 ಮತಗಟ್ಟೆಗಳಿಗೆ ಸಿಬ್ಬಂದಿ ನಿಯೋಜನೆ ಮಾಡಿ ಇಂದಿನಿಂದ ಆಯಾ ಗ್ರಾಮಗಳ ಮತಗಟ್ಟೆಗಳಿಗೆ ಅಧಿಕಾರಿಗಳು ವಿವಿ ಪ್ಯಾಟ್ ಮಷೀನ್ ಪೆಟ್ಟಿಗೆ ತೆಗೆದುಕೊಂಡು ತೆರಳಿದರು.

ವರದಿ: ಪಂಡಿತ್ ಯಂಪೂರೆ, ಸಿಂದಗಿ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group