ಪ್ರಥಮ ಪ್ರಾಶಸ್ತ್ಯದಲ್ಲಿಯೇ ಕವಟಗಿಮಠ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಮೂಡಲಗಿ : ವಿಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಪ್ರಥಮ ಪ್ರಾಶಸ್ತ್ಯದಲ್ಲಿಯೇ ಜಯ ಗಳಿಸಲಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರದಂದು ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮತ ಚಲಾಯಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಗೆಲುವಿನಿಂದ ಅರಭಾವಿ ಕ್ಷೇತ್ರವೂ ಸೇರಿದಂತೆ ಇಡೀ ಜಿಲ್ಲೆಯೂ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

ಇದೇ ಮೊದಲ ಬಾರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸುವ ಅವಕಾಶ ನನಗೆ ಸಿಕ್ಕಿದೆ. ಅದರಲ್ಲೂ ಮೂಡಲಗಿಯಲ್ಲಿ ಮತ ಚಲಾವಣೆ ಮಾಡಿರುವುದು ಖುಷಿ ತಂದಿದೆ. ಕಾರ್ಯಕರ್ತರ ಶ್ರಮದಿಂದ ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಜಯ ಗಳಿಸಲಿದ್ದಾರೆ ಎಂದು ಹೇಳಿದರು.

ಬಿಜೆಪಿ ಗೆಲ್ಲಿಸುವುದು ಮತ್ತು ಕಾಂಗ್ರೆಸ್ ಸೋಲಿಸುವುದು ನಮ್ಮ ಗುರಿಯಾಗಿತ್ತು. ಅದರಂತೆ ಮತದಾರರೂ ಸಹ ಈ ಚುನಾವಣೆಯಲ್ಲಿ ನಾವು ಹೇಳಿದಂತೆ ಮತ ಚಲಾಯಿಸಿದ್ದಾರೆ ಎಂದು ಅವರು ತಿಳಿಸಿದರು.

Latest News

ವಿಮರ್ಶೆಯಲ್ಲಿ ಸ್ತ್ರೀ ಸಾಹಿತ್ಯಕ್ಕೆ ಅನ್ಯಾಯ ; ವಿಚಾರ ಗೋಷ್ಠಿ,

ವಿಮರ್ಶೆಯಲ್ಲಿ ಸ್ತ್ರೀ ಸಾಹಿತ್ಯಕ್ಕೆ ಅನ್ಯಾಯ ಸಂವಾದ ಹಾಗೂ ಸ್ತ್ರೀಸಂವೇದನಗಳ ಬಗ್ಗೆ ಕವಿಗೋಷ್ಠಿ ಕಾರ್ಯಕ್ರವನ್ನು ಹಾಸನ ಜಿಲ್ಲಾ ಬರಹಗಾರರ ಸಂಘದ ವತಿಯಿಂದ ಡಿ. 07 - ಭಾನುವಾರ...

More Articles Like This

error: Content is protected !!
Join WhatsApp Group