ರವಿವಾರ ಪ್ರಶಸ್ತಿ ಪ್ರದಾನ ಸಮಾರಂಭ

Must Read

ಬೆಳಗಾವಿ -ಇಲ್ಲಿಯ ಬಿ.ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರವಿವಾರ ದಿನಾಂಕ ೧೨ ರಂದು ಮುಂಜಾನೆ ೧೦ – ೩೦ಕ್ಕೆ ಕನ್ನಡ ಸಾಹಿತ್ಯ ಭವನದಲ್ಲಿ ನಿಯೋಜಿಸಲಾಗಿದೆ.

ಡಾ. ಎಚ್ ಬಿ ರಾಜಶೇಖರ ಪ್ರಶಸ್ತಿ ಪ್ರದಾನ ಮಾಡುವರು. ಪ್ರೊ. ಎಲ್ ವಿ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಡಾ. ರಾಮಕೃಷ್ಣ ಮರಾಠೆ ಅಧ್ಯಕ್ಷತೆ ವಹಿಸುವರು. ೨೦೨೦ ನೇ ಸಾಲಿನ ಕನ್ನಡ ಗಡಿತಿಲಕ ಪ್ರಶಸ್ತಿಯನ್ನು ಬೆಳಗಾವಿ ಶಿವಬಸವ ನಗರದ “ವಚನ ಅಧ್ಯಯನ ಕೇಂದ್ರಕ್ಕೆ “ಮತ್ತು ಈ ವರ್ಷದ ಕನ್ನಡ ಗಡಿತಿಲಕ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ ಅವರಿಗೆ ಹಾಗೂ ಉದಯೋನ್ಮುಖ ಕವಿಗಳಿಗೆ ನೀಡುವ ರಾಜ್ಯಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಯನ್ನು ಕೊಪ್ಪಳದ ಯುವ ಕವಿ ಶ್ರೀ ಮೆಹಬೂಬ್ ಮಠದ ಇವರಿಗೆ ನೀಡಿ ಗೌರವಿಸಲಾಗುವದು ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಂ. ವಾಯ್. ಮೆಣಸಿನಕಾಯಿ ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group