ಪಿಎಂ ಆವಾಸ್ ನಗರ ಯೋಜನೆಯಡಿ ಮನೆ ಮಂಜೂರು

Must Read

ಮೂಡಲಗಿ: ಬೆಳಗಾವಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ (ಪಿ.ಎಂ.ಎ.ವಾಯ್-ಯು) ಅಡಿಯಲ್ಲಿ ಒಟ್ಟು 44,850 ಮನೆಗಳು ಮಂಜೂರಾಗಿದ್ದು, 27,887 ಮನೆಗಳು ನಿರ್ಮಾಣ ಹಂತದಲ್ಲಿವೆ. 18,400 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಸೋಮವಾರ ಡಿ.13 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು, ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಬೆಳಗಾವಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ ಸ್ಥಿತಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 6,93,577 ಮನೆಗಳು ಮಂಜೂರಾಗಿದ್ದು, 4,66,100 ಮನೆಗಳು ನಿರ್ಮಾಣ ಹಂತದಲ್ಲಿದ್ದು, 2,47,291 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಮಾರ್ಚ 2022 ರವರೆಗೆ ಮಂಜೂರಾದ ಎಲ್ಲಾ ಮನೆಗಳನ್ನು ಪೂರ್ಣಗೊಳ್ಳಲಿವೆ ಎಂದು ಉತ್ತರಿಸಿದ್ದಾರೆ ಎಂದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group