ನೇಮಿಚಂದ್ರ ನಿಧನಕ್ಕೆ ಸಂತಾಪ

Must Read

ಸಿಂದಗಿ: ಇತ್ತೀಚೆಗೆ ಅಕಾಲಿಕ ನಿಧನ ಹೊಂದಿದ ಸಾಮಾಜಿಕ ಹೋರಾಟಗಾರ್ತಿ ನೇಮಿಚಂದ್ರ (27) ಅವರ ನಿಧನಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದಿಂದ ಶನಿವಾರ ಸಂಜೆ ಗೌರವ ನಮನ ಸಲ್ಲಿಸಲಾಯಿತು.

ವಿಜಯಪುರ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹರ್ಷವರ್ಧನ ಪೂಜಾರಿ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಕ್ಯಾಂಡಲ್ ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹರ್ಷವರ್ಧನ ಪೂಜಾರಿ ನೇಮಿಚಂದ್ರ ಸಾಮಾಜಿಕ ಹೋರಾಟದ ಕುರಿತು, ಅವರ ಬದುಕಿನ ದಾರಿಯ ಕುರಿತು ಮಾತನಾಡಿದರು.

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನ ಭಾಗೇಶ ಹೂಗಾರ ಮಾತನಾಡಿ, ಅತೀ ಚಿಕ್ಕ ವಯಸ್ಸಿಗೆ ಓರ್ವ ದಿಟ್ಟ ಹೋರಾಟಗಾರ್ತಿಯನ್ನು ಕಳೆದುಕೊಂಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಇನ್ನು ನೇಮಿಚಂದ್ರ, ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸೇರಿದಂತೆ ಹಲವು ಜನರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಕಾನೂನು ವ್ಯಾಸಂಗ ಮಾಡುತ್ತಿದ್ದ ಇವರು ನ್ಯೂಮೋನಿಯಾದಿಂದಾಗಿ ಬೆಳಗಾವಿಯಲ್ಲಿ ಡಿಸೆಂಬರ್ 15 ರಂದು ನಿಧನ ಹೊಂದಿದರು.

ಈ ವೇಳೆ ದಲಿತ್ ವಿದ್ಯಾರ್ಥಿ ಪರಿಷತ್, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರಾದ  ಸುಮೀತ್ ಕಕ್ಕಸಗೇರಿ, ಕಿರಣ ಜಾಧವ, ತುಳಸಿರಾಮ ಚಿಕ್ಕ ಸಿಂದಗಿ, ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group