ಹೋರಾಟಗಾರ ಬೆನ್ನಿಗೆ ನಿಂತ ಸತೀಶ ಜಾರಕಿಹೊಳಿ; ನ್ಯಾಯ ಕೊಡಿಸುವ ಭರವಸೆ

Must Read

ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಏಳನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಂಬಲ ಸೂಚಿಸಿ, ಸಮಸ್ಯೆ ಆಲಿಸಿ ಅವರಿಂದ ಮನವಿ ಸ್ವೀಕರಿಸುವ ಕಾರ್ಯಕ್ಕೆ ಮುಂದಾಗುವ ಮೂಲಕ ಹೋರಾಟಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ.

ಬೆಳಗಾವಿ ಜಿಲ್ಲಾಡಳಿತದಿಂದ ಸುವರ್ಣಸೌಧದ ಸಮೀಪದಲ್ಲಿ ಪ್ರತಿಭಟನಾಕಾರರಿಗೆ ಟೆಂಟ್ ಗಳನ್ನು ನಿರ್ಮಿಸಲಾಗಿದೆ. ಕಳೆದ ಏಳು ದಿನಗಳಿಂದಲೂ ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳನ್ನು ಈಡೇರಿಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್ ಪಕ್ಷ ಪ್ರತಿಭಟನಾಕಾರರ ಧ್ವನಿಯಾಗಿ ಕೆಲಸ ಆರಂಭಿಸಿದೆ.

ಈ ಬಾರಿಯ ಬೆಳಗಾವಿಯ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಕೈ ನಾಯಕರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರನ್ನು ಪ್ರತಿಭಟನಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಸತೀಶ ಅವರು ಪ್ರತಿದಿನವೂ ಪ್ರತಿಭಟನಾ ಸ್ಥಳಗಳಿಗೆ ತೆರಳಿ ಹೋರಾಟಗಾರರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ.

ರಾಜ್ಯದ ಹಲವಾರು ಸಂಘಟನೆಗಳು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ. ಸತೀಶ್ ಜಾರಕಿಹೊಳಿ ಪ್ರತಿಭಟನಾಕಾರರ ಧ್ವನಿಯಾಗಿ, ನಿರ್ದಿಷ್ಟ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕಾರ್ಯ ಆರಂಭಿಸಿದ್ದು, ಸರ್ಕಾರದ ಗಮನಕ್ಕೆ ತಂದು ಹೋರಾಟಗಾರರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಲಾಗುತ್ತದೆ ಎಂಬ ಭರವಸೆ ನೀಡಿದ್ದಾರೆ.

ಗೋಕಾಕ ವಿಧಾನಸಭಾ ಮತಕ್ಷೇತ್ರದ ಅಕ್ಕತಂಗೇರಹಾಳ ಗ್ರಾಮಸ್ಥರು ಪಂಚಾಯ್ತಿ ಮೇಲ್ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮನವಿ ಸ್ವೀಕರಿಸಿ, ಕಾನೂನು ತಜ್ಞರೊಂದಿಗೆ ಚರ್ಚಿಸಿ ಪಟ್ಟಣ ಪಂಚಾಯ್ತಿಯನ್ನು ಮೇಲ್ದರ್ಜೆಗೆ ಏರಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂಬ ಭರವಸೆ ನೀಡಿದ್ದಾರೆ.

ಕಳೆದ ಎರಡ್ಮೂರು ವರ್ಷಗಳಿಂದ ಕೋವಿಡ್, ಅತಿವೃಷ್ಟಿ, ಪ್ರವಾಹದಿಂದ ನೇಕಾರರು ಸಂಪೂರ್ಣ ಆರ್ಥಿಕವಾಗಿ ಹಾನಿಯಾಗಿರುವುದರಿಂದ ಹಲವಾರು ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ನೇಕಾರರು, ರೈತರ ಬದುಕು ಬೀದಿ ಪಾಲಾಗುತ್ತಿದೆ. ಅಂತವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕಾರ್ಯಾಧ್ಯಕ್ಷರು ನೇಕಾರರು, ಅನ್ನದಾತರ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಸಮಸ್ಯೆಯನ್ನು ಆಲಿಸುವುದರ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ಮೇಲೆ ಕಾಣಿಸಿದ ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಕಾಂಗ್ರೆಸ್ ಪಕ್ಷ ಸದನದೊಳಗೆ ಧ್ವನಿ ಎತ್ತಿ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತೇವೆಂದು ಪ್ರತಿಭಟನಾನಿರತರಿಗೆ ಪಕ್ಷದ ಪರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು, ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಮಹಾಂತೇಶ ಕೌಜಲಗಿ, ಗಣೇಶ್ ಹುಕ್ಕೇರಿ, ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಮಾಜಿ ಶಾಸಕರು , ಹೋರಾಟ ಸಮಿತಿ ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಸಾಥ್ ನೀಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group